ಮಾ.22: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್-19 ಸೋಂಕಿತರುಗುಣಮುಖ?

ನವದೆಹಲಿ, ಮಾರ್ಚ್ 22: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 473,043,495ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,107,347 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 409,180,222 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 16 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 22ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1581 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1581 ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರಕ್ಕೆ ಇಳಿದಿದೆ. ಕಳೆದ 24 ಗಂಟೆಗಳಲ್ಲಿ 1581 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 58 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 2,741 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,010,971ಕ್ಕೆ ಏರಿಕೆಯಾಗಿದೆ. ಈ ಪೈಕಿ 42,470,515 ಸೋಂಕಿತರು ಗುಣಮುಖರಾಗಿದ್ದರೆ, 516,574 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 23,882 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 473,043,495 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,107,347 ಮಂದಿ ಪ್ರಾಣ ಬಿಟ್ಟಿದ್ದಾರೆ. 409,180,222 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 57,755,926 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,14,48,402

ಭಾರತ: 4,30,10,971

ಬ್ರೆಜಿಲ್: 2,96,41,848

ಫ್ರಾನ್ಸ್: 2,41,61,339

ಯುಕೆ: 2,03,19,434

ಜರ್ಮನಿ: 1,86,66,226

ರಷ್ಯಾ: 1,76,37,795

ಟರ್ಕಿ: 1,47,08,850

ಇಟಲಿ: 1,38,95,188

ಸ್ಪೇನ್: 1,13,24,637

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 9,98,840

ಬ್ರೆಜಿಲ್: 6,57,363

ಭಾರತ: 5,16,574

ರಷ್ಯಾ: 3,65,373

ಮೆಕ್ಸಿಕೋ: 3,22,107

ಪೆರು: 2,11,924

ಯುಕೆ: 1,63,679

ಇಟಲಿ: 1,57,904

ಇಂಡೋನೇಷಿಯಾ: 1,53,892

ಫ್ರಾನ್ಸ್: 1,41,085

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 6,32,54,918

ಭಾರತ: 4,24,70,515

ಬ್ರೆಜಿಲ್: 2,82,14,095

ಫ್ರಾನ್ಸ್: 2,26,41,524

ಯುಕೆ: 1,86,63,840

ಟರ್ಕಿ: 1,43,42,771

ರಷ್ಯಾ: 1,63,46,800

ಜರ್ಮನಿ: 1,49,04,100

ಅರ್ಜೆಂಟೀನಾ: 88,17,286

ಇರಾನ್: 68,28,714

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+