ಮಾ.24: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್-19 ಸೋಂಕಿತರುಗುಣಮುಖ?
ನವದೆಹಲಿ, ಮಾರ್ಚ್ 24: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 476,691,813ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,129,633 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 412,041,132 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 32 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಮುಗಿದಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 24ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1,938 ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರಕ್ಕೆ ಇಳಿದಿದೆ. ಕಳೆದ 24 ಗಂಟೆಗಳಲ್ಲಿ 1,938 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 67 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 2531 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,014,687ಕ್ಕೆ ಏರಿಕೆಯಾಗಿದೆ. ಈ ಪೈಕಿ 42,475,588 ಸೋಂಕಿತರು ಗುಣಮುಖರಾಗಿದ್ದರೆ, 516,703 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 22,396 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 476,691,813 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,129,633 ಮಂದಿ ಪ್ರಾಣ ಬಿಟ್ಟಿದ್ದಾರೆ. 412,041,132 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 58,521,048 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,15,27,329
ಭಾರತ: 4,30,14,687
ಬ್ರೆಜಿಲ್: 2,97,29,991
ಫ್ರಾನ್ಸ್: 2,44,87,676
ಯುಕೆ: 2,05,15,998
ಜರ್ಮನಿ: 1,94,36,127
ರಷ್ಯಾ: 1,76,90,008
ಟರ್ಕಿ: 1,47,43,437
ಇಟಲಿ: 1,40,70,450
ಸ್ಪೇನ್: 1,13,78,784

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,01,175
ಬ್ರೆಜಿಲ್: 6,58,067
ಭಾರತ: 5,16,703
ರಷ್ಯಾ: 3,66,220
ಮೆಕ್ಸಿಕೋ: 3,22,277
ಪೆರು: 2,11,944
ಯುಕೆ: 1,64,123
ಇಟಲಿ: 1,58,254
ಇಂಡೋನೇಷಿಯಾ: 1,54,221
ಫ್ರಾನ್ಸ್: 1,41,319

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 6,36,23,166
ಭಾರತ: 4,24,75,588
ಬ್ರೆಜಿಲ್: 2,83,63,966
ಫ್ರಾನ್ಸ್: 2,28,17,001
ಯುಕೆ: 1,87,30,567
ಟರ್ಕಿ: 1,43,85,264
ರಷ್ಯಾ: 1,64,83,898
ಜರ್ಮನಿ: 1,53,29,000
ಅರ್ಜೆಂಟೀನಾ: 88,23,74
ಇರಾನ್: 68,37,721
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications