ಮಾ.28: ಕೊರೊನಾವೈರಸ್‌ಗೆ ಯಾವ ದೇಶದಲ್ಲಿ ಮೃತಪಟ್ಟವರು ಎಷ್ಟು ಜನ?
ನವದೆಹಲಿ, ಮಾರ್ಚ್ 28: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 482,533,065ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,149,619 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 416,972,989 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 4 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಮುಗಿದಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 28ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1660 ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರಕ್ಕೆ ಇಳಿದಿದೆ. ಕಳೆದ 24 ಗಂಟೆಗಳಲ್ಲಿ 1,270 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 32 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1567 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,020,723ಕ್ಕೆ ಏರಿಕೆಯಾಗಿದೆ. ಈ ಪೈಕಿ 42,483,829 ಸೋಂಕಿತರು ಗುಣಮುಖರಾಗಿದ್ದರೆ, 521,066 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 15,828 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 482,533,065 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,149,619 ಮಂದಿ ಪ್ರಾಣ ಬಿಟ್ಟಿದ್ದಾರೆ. 416,972,989 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 59,410,457 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,16,21,888
ಭಾರತ: 4,30,20,723
ಬ್ರೆಜಿಲ್: 2,98,42,418
ಫ್ರಾನ್ಸ್: 2,50,29,573
ಯುಕೆ: 2,06,91,123
ಜರ್ಮನಿ: 2,02,51,037
ರಷ್ಯಾ: 1,77,83,843
ಟರ್ಕಿ: 1,48,00,677
ಇಟಲಿ: 1,43,64,723
ದಕ್ಷಿಣ ಕೊರಿಯಾ: 1,20,03,054

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,03,467
ಬ್ರೆಜಿಲ್: 6,58,626
ಭಾರತ: 5,21,066
ರಷ್ಯಾ: 3,67,686
ಮೆಕ್ಸಿಕೋ: 3,22,750
ಪೆರು: 2,12,128
ಯುಕೆ: 1,64,454
ಇಟಲಿ: 1,58,782
ಇಂಡೋನೇಷಿಯಾ: 1,54,774
ಫ್ರಾನ್ಸ್: 1,41,672

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 6,44,57,026
ಭಾರತ: 4,24,83,829
ಬ್ರೆಜಿಲ್: 2,84,97,468
ಫ್ರಾನ್ಸ್: 2,29,30,150
ಯುಕೆ: 1,87,83,177
ಟರ್ಕಿ: 1,44,56,857
ರಷ್ಯಾ: 1,66,89,977
ಜರ್ಮನಿ: 1,58,73,400
ಅರ್ಜೆಂಟೀನಾ: 88,38,674
ಇರಾನ್: 68,54,816
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications