ಮಾ.29: ಕೊರೊನಾವೈರಸ್‌ಗೆ ಯಾವ ದೇಶದಲ್ಲಿ ಎಷ್ಟು ಜನ ಸಾವು?
ನವದೆಹಲಿ, ಮಾರ್ಚ್ 29: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 483,919,388ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,152,872 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 418,161,489 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 16 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಮುಗಿದಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 29ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1259 ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರಕ್ಕಿಂತ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,259 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 32 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1705 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,021,982ಕ್ಕೆ ಏರಿಕೆಯಾಗಿದೆ. ಈ ಪೈಕಿ 42,485,534 ಸೋಂಕಿತರು ಗುಣಮುಖರಾಗಿದ್ದರೆ, 521,098 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 15,350 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 483,919,388 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,152,872 ಮಂದಿ ಪ್ರಾಣ ಬಿಟ್ಟಿದ್ದಾರೆ. 418,161,489 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 59,605,027 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,16,58,973
ಭಾರತ: 4,30,21,982
ಬ್ರೆಜಿಲ್: 2,98,52,341
ಫ್ರಾನ್ಸ್: 2,50,59,028
ಯುಕೆ: 2,09,05,515
ಜರ್ಮನಿ: 2,04,65,072
ರಷ್ಯಾ: 1,78,03,503
ಟರ್ಕಿ: 1,48,15,041
ಇಟಲಿ: 1,43,96,283
ದಕ್ಷಿಣ ಕೊರಿಯಾ: 1,23,50,428

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,04,244
ಬ್ರೆಜಿಲ್: 6,59,012
ಭಾರತ: 5,21,098
ರಷ್ಯಾ: 3,68,025
ಮೆಕ್ಸಿಕೋ: 3,22,761
ಪೆರು: 2,12,157
ಯುಕೆ: 1,64,671
ಇಟಲಿ: 1,58,877
ಇಂಡೋನೇಷಿಯಾ: 1,54,774
ಫ್ರಾನ್ಸ್: 1,41,821

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 6,46,83,169
ಭಾರತ: 4,24,85,534
ಬ್ರೆಜಿಲ್: 2,85,50,311
ಫ್ರಾನ್ಸ್: 2,30,23,051
ಯುಕೆ: 1,89,03,733
ಟರ್ಕಿ: 1,44,75,383
ರಷ್ಯಾ: 1,67,37,206
ಜರ್ಮನಿ: 1,60,92,900
ಅರ್ಜೆಂಟೀನಾ: 88,52,314
ಇರಾನ್: 68,58,772
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications