ಮಾ.31: ಜಗತ್ತಿನ ಯಾವ ರಾಷ್ಟ್ರದಲ್ಲಿ ಕೋವಿಡ್ ಗುಣಮುಖರ ಸಂಖ್ಯೆ ಎಷ್ಟು?
ನವದೆಹಲಿ, ಮಾರ್ಚ್ 31: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 487,202,497ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,162,919 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 422,428,601 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 31 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಮುಗಿದಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 31ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1,225 ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರಕ್ಕಿಂತ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,225 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 28 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1,594 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,024,440ಕ್ಕೆ ಏರಿಕೆಯಾಗಿದೆ. ಈ ಪೈಕಿ 42,489,004 ಸೋಂಕಿತರು ಗುಣಮುಖರಾಗಿದ್ದರೆ, 521,159 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 14,277 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 487,202,497 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,162,919 ಮಂದಿ ಪ್ರಾಣ ಬಿಟ್ಟಿದ್ದಾರೆ. 422,428,601 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 58,610,977 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,17,40,722
ಭಾರತ: 4,30,24,440
ಬ್ರೆಜಿಲ್: 2,99,16,334
ಫ್ರಾನ್ಸ್: 2,54,45,532
ಯುಕೆ: 2,10,73,009
ಜರ್ಮನಿ: 2,09,70,207
ರಷ್ಯಾ: 1,78,23,648
ಟರ್ಕಿ: 1,48,46,224
ಇಟಲಿ: 1,45,67,990
ದಕ್ಷಿಣ ಕೊರಿಯಾ: 1,30,95,631

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,06,445
ಬ್ರೆಜಿಲ್: 6,59,570
ಭಾರತ: 5,21,159
ರಷ್ಯಾ: 3,68,377
ಮೆಕ್ಸಿಕೋ: 3,22,948
ಪೆರು: 2,12,207
ಯುಕೆ: 1,65,187
ಇಟಲಿ: 1,59,224
ಇಂಡೋನೇಷಿಯಾ: 1,55,000
ಫ್ರಾನ್ಸ್: 1,42,134

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 6,50,73,099
ಭಾರತ: 4,24,89,004
ಬ್ರೆಜಿಲ್: 2,86,79,560
ಫ್ರಾನ್ಸ್: 2,31,66,746
ಯುಕೆ: 1,89,95,883
ಟರ್ಕಿ: 1,45,15,495
ರಷ್ಯಾ: 1,67,88,291
ಜರ್ಮನಿ: 1,65,46,900
ಅರ್ಜೆಂಟೀನಾ: 88,56,717
ಇರಾನ್: 68,68,435
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)
{document1}












Click it and Unblock the Notifications