ಮಾ.4: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊರೊನಾವೈರಸ್ ಸೋಂಕಿತರು ಗುಣಮುಖ?

ನವದೆಹಲಿ, ಮಾರ್ಚ್ 4: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 442,645,369ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,004,036 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 375,669,251 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 49 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 4ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 6 ಸಾವಿರ ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 6 ಸಾವಿರ ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ 6 ಸಾವಿರ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 6,396 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 201 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 13,450 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 42,951,556ಕ್ಕೆ ಏರಿಕೆಯಾಗಿದೆ. ಈ ಪೈಕಿ 42,367,070 ಸೋಂಕಿತರು ಗುಣಮುಖರಾಗಿದ್ದರೆ, 514,620 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 69,866 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 442,645,369 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,004,036 ಮಂದಿ ಪ್ರಾಣ ಬಿಟ್ಟಿದ್ದಾರೆ. 375,669,251 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 60,972,082 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,08,43,570

ಭಾರತ: 4,29,51,556

ಬ್ರೆಜಿಲ್: 2,89,06,214

ಫ್ರಾನ್ಸ್: 2,29,00,531

ಯುಕೆ: 1,90,74,696

ರಷ್ಯಾ: 1,66,85,850

ಜರ್ಮನಿ: 1,53,75,508

ಟರ್ಕಿ: 1,42,55,545

ಇಟಲಿ: 1,29,10,506

ಸ್ಪೇನ್: 1,10,78,028

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 9,81,729

ಬ್ರೆಜಿಲ್: 6,50,646

ಭಾರತ: 5,14,620

ರಷ್ಯಾ: 3,54,011

ಮೆಕ್ಸಿಕೋ: 3,19,296

ಪೆರು: 2,10,907

ಯುಕೆ: 1,61,898

ಇಟಲಿ: 1,55,399

ಇಂಡೋನೇಷಿಯಾ: 1,49,268

ಫ್ರಾನ್ಸ್: 1,38,942

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 5,41,36,964

ಭಾರತ: 4,23,67,070

ಬ್ರೆಜಿಲ್: 2,68,10,286

ಫ್ರಾನ್ಸ್: 2,13,64,712

ಯುಕೆ: 1,75,37,214

ಟರ್ಕಿ: 1,35,72,870

ರಷ್ಯಾ: 1,41,02,684

ಜರ್ಮನಿ: 1,18,98,500

ಅರ್ಜೆಂಟೀನಾ: 87,05,178

ಇರಾನ್: 66,96,494

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+