ಮಾ.5: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊರೊನಾವೈರಸ್ ಸೋಂಕಿತರು ಗುಣಮುಖ?
ನವದೆಹಲಿ, ಮಾರ್ಚ್ 5: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 444,209,716ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,011,171 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 377,109,081 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 45 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 5ರ ಪ್ರಕಾರ) ಇಲ್ಲಿದೆ.

ಕಳೆದ ಒಂದು ದಿನದಲ್ಲಿ 6 ಸಾವಿರಕ್ಕಿಂತ ಕಡಿಮೆ ಪ್ರಕರಣ
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ಬಹುಪಾಲು ತಗ್ಗಿದೆ. ಭಾರತದಲ್ಲಿ ಕಳೆದೊಂದು ದಿನದಲ್ಲಿ 6 ಸಾವಿರಕ್ಕಿಂತ ಕಡಿಮೆ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 5,921 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 288 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 11,651 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 42,957,477ಕ್ಕೆ ಏರಿಕೆಯಾಗಿದೆ. ಈ ಪೈಕಿ 42,378,721 ಸೋಂಕಿತರು ಗುಣಮುಖರಾಗಿದ್ದರೆ, 514,908 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 63,848 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 444,209,716 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,011,171 ಮಂದಿ ಪ್ರಾಣ ಬಿಟ್ಟಿದ್ದಾರೆ. 377,109,081 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 61,089,464 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,08,95,651
ಭಾರತ: 4,29,57,477
ಬ್ರೆಜಿಲ್: 2,89,74,315
ಫ್ರಾನ್ಸ್: 2,29,58,320
ಯುಕೆ: 1,91,19,181
ರಷ್ಯಾ: 1,67,75,024
ಜರ್ಮನಿ: 1,55,79,480
ಟರ್ಕಿ: 1,42,93,828
ಇಟಲಿ: 1,29,48,859
ಸ್ಪೇನ್: 1,11,00,428

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 9,83,486
ಬ್ರೆಜಿಲ್: 6,51,343
ಭಾರತ: 5,14,908
ರಷ್ಯಾ: 3,54,787
ಮೆಕ್ಸಿಕೋ: 3,19,604
ಪೆರು: 2,10,995
ಯುಕೆ: 1,62,008
ಇಟಲಿ: 1,55,609
ಇಂಡೋನೇಷಿಯಾ: 1,49,596
ಫ್ರಾನ್ಸ್: 1,39,123

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 5,43,44,934
ಭಾರತ: 4,23,78,721
ಬ್ರೆಜಿಲ್: 2,69,09,481
ಫ್ರಾನ್ಸ್: 2,14,83.142
ಯುಕೆ: 1,75,37,214
ಟರ್ಕಿ: 1,36,36,181
ರಷ್ಯಾ: 1,42,63,191
ಜರ್ಮನಿ: 1,20,33,600
ಅರ್ಜೆಂಟೀನಾ: 87,20,016
ಇರಾನ್: 67,09,131
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications