ಮೇ 10 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಮೇ 10: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 517,849,029ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,278,204 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 472,714,346 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 10ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 4,195 ಮಂದಿಗೆ ಕೋವಿಡ್

ದೇಶದಲ್ಲಿ ಒಂದೇ ದಿನ 4,195 ಮಂದಿಗೆ ಕೋವಿಡ್

ದೇಶದಲ್ಲಿ ಸೋಮವಾರ 3207 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವರದಿಯಾದ ಬೆನ್ನಲ್ಲೇ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ 2288 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕಳೆದ ಒಂದು ದಿನದಲ್ಲಿ ಕೊರೊನಾವೈರಸ್ ಸೋಂಕಿನಿಂದ 10 ಮಂದಿ ಪ್ರಾಣ ಬಿಟ್ಟಿದ್ದಾರೆ. 3044 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಇದುವರೆಗೂ 4,25,63,9495 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 5,24,103 ಮಂದಿ ಪ್ರಾಣ ಬಿಟ್ಟಿದ್ದು, ಮೃತ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 19,637 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.05ರಷ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೋವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೋವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 517,849,029 ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,278,204 ಮಂದಿ ಪ್ರಾಣ ಬಿಟ್ಟಿದ್ದಾರೆ. 472,714,346 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 38,856,479 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೋವಿಡ್-19 ಬಾಧಿತ ಟಾಪ್ 10 ದೇಶಗಳು

ಕೋವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,36,88,188

ಭಾರತ: 4,31,07,689

ಬ್ರೆಜಿಲ್: 3,05,74,245

ಫ್ರಾನ್ಸ್: 2,89,64,775

ಜರ್ಮನಿ: 2,53,85,707

ಯುಕೆ: 2,21,40,287

ರಷ್ಯಾ: 1,82,32,696

ದಕ್ಷಿಣ ಕೊರಿಯಾ: 1,76,14,895

ಇಟಲಿ: 1,68,16,419

ಟರ್ಕಿ: 1,50,44,921

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,24,752

ಬ್ರೆಜಿಲ್: 6,64,248

ಭಾರತ: 5,24,103

ರಷ್ಯಾ: 3,77,049

ಮೆಕ್ಸಿಕೋ: 3,24,465

ಪೆರು: 2,12,957

ಯುಕೆ: 1,76,424

ಇಟಲಿ: 1,64,573

ಇಂಡೋನೇಷಿಯಾ: 1,56,396

ಫ್ರಾನ್ಸ್: 1,46,856

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,10,19,770

ಭಾರತ: 4,25,63,949

ಬ್ರೆಜಿಲ್: 2,96,52,018

ಫ್ರಾನ್ಸ್: 2,76,69,443

ಜರ್ಮನಿ: 2,35,36,900

ಯುಕೆ: 2,15,58,361

ರಷ್ಯಾ: 1,76,09,357

ಟರ್ಕಿ: 1,49,42,882

ಅರ್ಜೆಂಟೀನಾ: 88,95,999

ಇರಾನ್: 70,08,231

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+