ಮೇ 11 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಮೇ 11: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 518,578,240ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,280,521 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 473,466,586 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 11ರ ಪ್ರಕಾರ) ಇಲ್ಲಿದೆ.

 ದೇಶದಲ್ಲಿ ಒಂದೇ ದಿನ 2,897 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,897 ಮಂದಿಗೆ ಕೊವಿಡ್

ದೇಶದಲ್ಲಿ ಮಂಗಳವಾರ 2,288 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವರದಿಯಾದ ಬೆನ್ನಲ್ಲೇ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ 2897 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕಳೆದ ಒಂದು ದಿನದಲ್ಲಿ ಕೊರೊನಾವೈರಸ್ ಸೋಂಕಿನಿಂದ 54 ಮಂದಿ ಪ್ರಾಣ ಬಿಟ್ಟಿದ್ದಾರೆ. 2986 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಇದುವರೆಗೂ 1,90,67,50,631 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 5,24,157 ಮಂದಿ ಪ್ರಾಣ ಬಿಟ್ಟಿದ್ದು, ಮೃತ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 19,494 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.05ರಷ್ಟಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 518,578,240 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,280,521 ಮಂದಿ ಪ್ರಾಣ ಬಿಟ್ಟಿದ್ದಾರೆ. 473,466,586 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 38,831,133 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

 ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,37,78,760
ಭಾರತ: 4,31,10,586
ಬ್ರೆಜಿಲ್: 3,05,94,388
ಫ್ರಾನ್ಸ್: 2,902,1,224
ಜರ್ಮನಿ: 2,54,90,156
ಯುಕೆ: 2,21,44,628
ರಷ್ಯಾ: 1,82,41,329
ದಕ್ಷಿಣ ಕೊರಿಯಾ: 1,76,58,794
ಇಟಲಿ: 1,68,72,618
ಟರ್ಕಿ: 1,50,46,779

 ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,25,104
ಬ್ರೆಜಿಲ್: 6,64,443
ಭಾರತ: 5,24,157
ರಷ್ಯಾ: 3,77,248
ಮೆಕ್ಸಿಕೋ: 3,24,465
ಪೆರು: 2,12,968
ಯುಕೆ: 1,76,424
ಇಟಲಿ: 1,64,731
ಇಂಡೋನೇಷಿಯಾ: 1,56,416
ಫ್ರಾನ್ಸ್: 1,46,979

 ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,10,59,093
ಭಾರತ: 4,25,66,935
ಬ್ರೆಜಿಲ್: 2,96,81,120
ಫ್ರಾನ್ಸ್: 2,78,25,031
ಜರ್ಮನಿ: 2,36,76,700
ಯುಕೆ: 2,15,89,987
ರಷ್ಯಾ: 1,76,19,414
ಟರ್ಕಿ: 1,49,44,393
ಅರ್ಜೆಂಟೀನಾ: 88,95,999
ಇರಾನ್: 70,10,698
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+