ಮೇ 12 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ನವದೆಹಲಿ, ಮೇ 12: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 519,245,426ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,282,545 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 474,088,005 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 12ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,827 ಮಂದಿಗೆ ಕೊವಿಡ್
ದೇಶದಲ್ಲಿ ಬುಧವಾರ 2,897 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವರದಿಯಾದ ಬೆನ್ನಲ್ಲೇ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ 2827 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕಳೆದ ಒಂದು ದಿನದಲ್ಲಿ ಕೊರೊನಾವೈರಸ್ ಸೋಂಕಿನಿಂದ 24 ಮಂದಿ ಪ್ರಾಣ ಬಿಟ್ಟಿದ್ದಾರೆ. 2986 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.
ಭಾರತದಲ್ಲಿ ಇದುವರೆಗೂ 2,89,98,078, ಬೂಸ್ಟರ್ ಡೋಸ್‌ನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗಿದ್ದು,ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 5,24,181 ಮಂದಿ ಪ್ರಾಣ ಬಿಟ್ಟಿದ್ದು, ಮೃತ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 19,067 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 519,245,426 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,282,545 ಮಂದಿ ಪ್ರಾಣ ಬಿಟ್ಟಿದ್ದಾರೆ. 474,088,005 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 38,874,876 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,39,53,371
ಭಾರತ: 4,31,13,413
ಬ್ರೆಜಿಲ್: 3,06,17,786
ಫ್ರಾನ್ಸ್: 2,90,61,523
ಜರ್ಮನಿ: 2,55,83,258
ಯುಕೆ: 2,21,45,157
ರಷ್ಯಾ: 1,82,41,329
ದಕ್ಷಿಣ ಕೊರಿಯಾ: 1,76,94,677
ಇಟಲಿ: 1,69,15,301
ಟರ್ಕಿ: 1,50,48,449

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,25,764
ಬ್ರೆಜಿಲ್: 6,64,564
ಭಾರತ: 5,24,181
ರಷ್ಯಾ: 3,77,248
ಮೆಕ್ಸಿಕೋ: 3,24,465
ಪೆರು: 2,12,979
ಯುಕೆ: 1,76,424
ಇಟಲಿ: 1,64,846
ಇಂಡೋನೇಷಿಯಾ: 1,56,424
ಫ್ರಾನ್ಸ್: 1,47,075

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,11,07,296
ಭಾರತ: 4,25,70,165
ಬ್ರೆಜಿಲ್: 2,96,97,931
ಫ್ರಾನ್ಸ್: 2,79,28,942
ಜರ್ಮನಿ: 2,38,04,600
ಯುಕೆ: 2,16,16,597
ರಷ್ಯಾ: 1,76,19,414
ಟರ್ಕಿ: 1,49,46,104
ಅರ್ಜೆಂಟೀನಾ: 88,95,999
ಇರಾನ್: 70,10,770