ಮೇ 17 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಮೇ 17: ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 523,357,366ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,290,998 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 493,351,936 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾ ವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 17ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1,569 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1,569 ಮಂದಿಗೆ ಕೊವಿಡ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,569 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ದೇಶದಲ್ಲಿ ಒಂದು ದಿನದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದ 19 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,467 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಇದುವರೆಗೂ 43,125,370 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,260 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 16,400 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೋವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೋವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 523,357,366 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,290,998 ಮಂದಿ ಪ್ರಾಣ ಬಿಟ್ಟಿದ್ದಾರೆ. 493,351,936 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,714,432 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,43,57,607

ಭಾರತ: 4,31,25,370

ಬ್ರೆಜಿಲ್: 3,07,01,900

ಫ್ರಾನ್ಸ್: 2,91,89,582

ಜರ್ಮನಿ: 2,58,09,664

ಯುಕೆ: 2,22,03,799

ರಷ್ಯಾ: 1,82,64,836

ದಕ್ಷಿಣ ಕೊರಿಯಾ: 1,78,30,429

ಇಟಲಿ: 1,70,71,649

ಟರ್ಕಿ: 1,50,55,576

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,26,899

ಬ್ರೆಜಿಲ್: 6,65,056

ಭಾರತ: 5,24,260

ರಷ್ಯಾ: 3,77,759

ಮೆಕ್ಸಿಕೋ: 3,24,617

ಪೆರು: 2,13,044

ಯುಕೆ: 1,77,410

ಇಟಲಿ: 1,65,346

ಇಂಡೋನೇಷಿಯಾ: 1,56,464

ಫ್ರಾನ್ಸ್: 1,47,478

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,13,27,131

ಭಾರತ: 4,25,84,710

ಬ್ರೆಜಿಲ್: 2,97,24,682

ಫ್ರಾನ್ಸ್: 2,82,67,935

ಜರ್ಮನಿ: 2,41,55,900

ಯುಕೆ: 2,17,34,186

ರಷ್ಯಾ: 1,76,52,558

ಟರ್ಕಿ: 1,49,53,786

ಅರ್ಜೆಂಟೀನಾ: 88,95,999

ಇರಾನ್: 70,22,911

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+