ಮೇ 18 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಮೇ 18: ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 524,264,972ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,293,041 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 494,204,652 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 18ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1,829 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1,829 ಮಂದಿಗೆ ಕೊವಿಡ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,829 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ದೇಶದಲ್ಲಿ ಒಂದು ದಿನದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದ 33 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,549 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಇದುವರೆಗೂ 43,127,199 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,293 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 15,647 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 524,264,972 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,293,041 ಮಂದಿ ಪ್ರಾಣ ಬಿಟ್ಟಿದ್ದಾರೆ. 494,204,652 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,767,279 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,44,73,447

ಭಾರತ: 4,31,27,199

ಬ್ರೆಜಿಲ್: 3,07,28,286

ಫ್ರಾನ್ಸ್: 2,92,33,309

ಜರ್ಮನಿ: 2,58,92,255

ಯುಕೆ: 2,22,07,102

ರಷ್ಯಾ: 1,82,68,958

ದಕ್ಷಿಣ ಕೊರಿಯಾ: 1,78,61,744

ಇಟಲಿ: 1,71,16,550

ಟರ್ಕಿ: 1,50,57,184

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,27,285

ಬ್ರೆಜಿಲ್: 6,65,277

ಭಾರತ: 5,24,293

ರಷ್ಯಾ: 3,77,869

ಮೆಕ್ಸಿಕೋ: 3,24,617

ಪೆರು: 2,13,058

ಯುಕೆ: 1,77,410

ಇಟಲಿ: 1,65,481

ಇಂಡೋನೇಷಿಯಾ: 1,56,481

ಫ್ರಾನ್ಸ್: 1,47,568

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,13,80,775

ಭಾರತ: 4,25,87,259

ಬ್ರೆಜಿಲ್: 2,97,24,682

ಫ್ರಾನ್ಸ್: 2,83,35,556

ಜರ್ಮನಿ: 2,42,99,000

ಯುಕೆ: 2,17,34,193

ರಷ್ಯಾ: 1,76,58,542

ಟರ್ಕಿ: 1,49,55,005

ಅರ್ಜೆಂಟೀನಾ: 88,95,999

ಇರಾನ್: 70,24,787

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+