• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೇ 19 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

|
Google Oneindia Kannada News

ನವದೆಹಲಿ, ಮೇ 19: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 525,218,961ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,295,266 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 495,009,673 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

Breaking: ಮುಂಬೈನಲ್ಲಿ ಕೊರೊನಾ ವೈರಸ್ ಹೊಸ ದಾಖಲೆBreaking: ಮುಂಬೈನಲ್ಲಿ ಕೊರೊನಾ ವೈರಸ್ ಹೊಸ ದಾಖಲೆ

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 19ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,364 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,364 ಮಂದಿಗೆ ಕೊವಿಡ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,364 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ದೇಶದಲ್ಲಿ ಒಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 10 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,582 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಇದುವರೆಗೂ 43,129,563 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,303 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 15,419 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 525,218,961 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,295,266 ಮಂದಿ ಪ್ರಾಣ ಬಿಟ್ಟಿದ್ದಾರೆ. 495,009,673 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,914,022 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,46,92,706

ಭಾರತ: 4,31,29,563

ಬ್ರೆಜಿಲ್: 3,07,41,811

ಫ್ರಾನ್ಸ್: 2,92,63,304

ಜರ್ಮನಿ: 2,59,56,837

ಯುಕೆ: 2,22,07,102

ರಷ್ಯಾ: 1,82,78,617

ದಕ್ಷಿಣ ಕೊರಿಯಾ: 1,78,89,849

ಇಟಲಿ: 1,71,47,477

ಟರ್ಕಿ: 1,50,58,627

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,28,014

ಬ್ರೆಜಿಲ್: 6,65,376

ಭಾರತ: 5,24,303

ರಷ್ಯಾ: 3,78,072

ಮೆಕ್ಸಿಕೋ: 3,24,617

ಪೆರು: 2,13,069

ಯುಕೆ: 1,77,410

ಇಟಲಿ: 1,65,630

ಇಂಡೋನೇಷಿಯಾ: 1,56,510

ಫ್ರಾನ್ಸ್: 1,47,648

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,14,38,103

ಭಾರತ: 4,25,89,841

ಬ್ರೆಜಿಲ್: 2,97,46,640

ಫ್ರಾನ್ಸ್: 2,83,95,236

ಜರ್ಮನಿ: 2,44,25,500

ಯುಕೆ: 2,17,55,622

ರಷ್ಯಾ: 1,76,70,628

ಟರ್ಕಿ: 1,49,56,279

ಅರ್ಜೆಂಟೀನಾ: 88,95,999

ಇರಾನ್: 70,26,733

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on May 19th the total cases are at 525,218,961 with death is 6,295,266. The total number of recoveries is 495,009,673.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X