ಮೇ 19 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ನವದೆಹಲಿ, ಮೇ 19: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 525,218,961ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,295,266 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 495,009,673 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
Breaking: ಮುಂಬೈನಲ್ಲಿ ಕೊರೊನಾ ವೈರಸ್ ಹೊಸ ದಾಖಲೆ
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 19ರ ಪ್ರಕಾರ) ಇಲ್ಲಿದೆ.
ದೇಶದಲ್ಲಿ ಒಂದೇ ದಿನ 2,364 ಮಂದಿಗೆ ಕೊವಿಡ್
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,364 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ದೇಶದಲ್ಲಿ ಒಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 10 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,582 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಇದುವರೆಗೂ 43,129,563 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,303 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 15,419 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ.
ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 525,218,961 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,295,266 ಮಂದಿ ಪ್ರಾಣ ಬಿಟ್ಟಿದ್ದಾರೆ. 495,009,673 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,914,022 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.
ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,46,92,706
ಭಾರತ: 4,31,29,563
ಬ್ರೆಜಿಲ್: 3,07,41,811
ಫ್ರಾನ್ಸ್: 2,92,63,304
ಜರ್ಮನಿ: 2,59,56,837
ಯುಕೆ: 2,22,07,102
ರಷ್ಯಾ: 1,82,78,617
ದಕ್ಷಿಣ ಕೊರಿಯಾ: 1,78,89,849
ಇಟಲಿ: 1,71,47,477
ಟರ್ಕಿ: 1,50,58,627
ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,28,014
ಬ್ರೆಜಿಲ್: 6,65,376
ಭಾರತ: 5,24,303
ರಷ್ಯಾ: 3,78,072
ಮೆಕ್ಸಿಕೋ: 3,24,617
ಪೆರು: 2,13,069
ಯುಕೆ: 1,77,410
ಇಟಲಿ: 1,65,630
ಇಂಡೋನೇಷಿಯಾ: 1,56,510
ಫ್ರಾನ್ಸ್: 1,47,648
ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,14,38,103
ಭಾರತ: 4,25,89,841
ಬ್ರೆಜಿಲ್: 2,97,46,640
ಫ್ರಾನ್ಸ್: 2,83,95,236
ಜರ್ಮನಿ: 2,44,25,500
ಯುಕೆ: 2,17,55,622
ರಷ್ಯಾ: 1,76,70,628
ಟರ್ಕಿ: 1,49,56,279
ಅರ್ಜೆಂಟೀನಾ: 88,95,999
ಇರಾನ್: 70,26,733
(ಮಾಹಿತಿ ಕೃಪೆ: ವರ್ಲ್ಡ್ಮೀಟರ್)