ಮೇ 21 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ನವದೆಹಲಿ, ಮೇ 21: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 526,816,398ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,299,106 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 496,637,421 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 21ರ ಪ್ರಕಾರ) ಇಲ್ಲಿದೆ.
ದೇಶದಲ್ಲಿ ಒಂದೇ ದಿನ 2,510 ಮಂದಿಗೆ ಕೊವಿಡ್
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,510 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ದೇಶದಲ್ಲಿ ಒಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 25 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,346 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಇದುವರೆಗೂ 43,134,332 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,348 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 15,183 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ.
ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 526,816,398 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,299,106 ಮಂದಿ ಪ್ರಾಣ ಬಿಟ್ಟಿದ್ದಾರೆ. 496,637,421 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,879,871 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.
ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,49,35,262
ಭಾರತ: 4,31,34,332
ಬ್ರೆಜಿಲ್: 3,07,62,413
ಫ್ರಾನ್ಸ್: 2,93,15,478
ಜರ್ಮನಿ: 2,60,53,934
ಯುಕೆ: 2,22,38,715
ರಷ್ಯಾ: 1,82,83,706
ದಕ್ಷಿಣ ಕೊರಿಯಾ: 1,79,38,399
ಇಟಲಿ: 1,72,05,017
ಟರ್ಕಿ: 1,50,60,112
ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,28,741
ಬ್ರೆಜಿಲ್: 6,65,595
ಭಾರತ: 5,24,348
ರಷ್ಯಾ: 3,78,168
ಮೆಕ್ಸಿಕೋ: 3,24,617
ಪೆರು: 2,13,086
ಯುಕೆ: 1,77,977
ಇಟಲಿ: 1,65,827
ಇಂಡೋನೇಷಿಯಾ: 1,56,513
ಫ್ರಾನ್ಸ್: 1,47,780
ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,15,45,166
ಭಾರತ: 4,25,92,801
ಬ್ರೆಜಿಲ್: 2,98,01,225
ಫ್ರಾನ್ಸ್: 2,84,97,505
ಜರ್ಮನಿ: 2,45,75,600
ಯುಕೆ: 2,18,04,498
ರಷ್ಯಾ: 1,76,76,801
ಟರ್ಕಿ: 1,49,57,668
ಅರ್ಜೆಂಟೀನಾ: 88,95,999
ಇರಾನ್: 70,30,355
(ಮಾಹಿತಿ ಕೃಪೆ: ವರ್ಲ್ಡ್ಮೀಟರ್)