ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 23 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

|
Google Oneindia Kannada News

ನವದೆಹಲಿ, ಮೇ 23: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 527,799,496ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,300,434 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 498,043,212 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ.

Breaking: ಭಾರತದಲ್ಲಿ ಕೊರೊನಾದಿಂದ 30 ನಿಮಿಷಕ್ಕೆ ಒಬ್ಬರು ಸಾವು!Breaking: ಭಾರತದಲ್ಲಿ ಕೊರೊನಾದಿಂದ 30 ನಿಮಿಷಕ್ಕೆ ಒಬ್ಬರು ಸಾವು!

ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 23ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,022 ಮಂದಿಗೆ ಕೋ ವಿಡ್

ದೇಶದಲ್ಲಿ ಒಂದೇ ದಿನ 2,022 ಮಂದಿಗೆ ಕೋ ವಿಡ್

ಕಳೆದ 24 ಗಂಟೆಗಳಲ್ಲಿ 2,022 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದ 46 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,099 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,138,393ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,599,102 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.75ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 5,24,459 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 14,832 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.03ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೋವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೋವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 527,799,496 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,300,434 ಮಂದಿ ಪ್ರಾಣ ಬಿಟ್ಟಿದ್ದಾರೆ. 498,043,212 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,455,850 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,50,04,438

ಭಾರತ: 4,31,38,393

ಬ್ರೆಜಿಲ್: 3,07,91,220

ಫ್ರಾನ್ಸ್: 2,93,54,950

ಜರ್ಮನಿ: 2,60,85,617

ಯುಕೆ: 2,22,38,715

ರಷ್ಯಾ: 1,82,93,450

ದಕ್ಷಿಣ ಕೊರಿಯಾ: 1,79,67,672

ಇಟಲಿ: 1,72,47,552

ಟರ್ಕಿ: 1,50,62,281

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,28,924

ಬ್ರೆಜಿಲ್: 6,65,680

ಭಾರತ: 5,24,459

ರಷ್ಯಾ: 3,78,350

ಮೆಕ್ಸಿಕೋ: 3,24,617

ಪೆರು: 2,13,106

ಯುಕೆ: 1,77,977

ಇಟಲಿ: 1,65,952

ಇಂಡೋನೇಷಿಯಾ: 1,56,522

ಫ್ರಾನ್ಸ್: 1,47,780

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,16,32,147

ಭಾರತ: 4,25,99,102

ಬ್ರೆಜಿಲ್: 2,98,32,019

ಫ್ರಾನ್ಸ್: 2,85,42,968

ಜರ್ಮನಿ: 2,47,08,600

ಯುಕೆ: 2,18,36,316

ರಷ್ಯಾ: 1,76,88,903

ಟರ್ಕಿ: 1,49,59,906

ಅರ್ಜೆಂಟೀನಾ: 88,95,999

ಇರಾನ್: 70,30,986

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on May 23rd the total cases are at 527,799,496 with death is 6,300,434. The total number of recoveries is 498,043,212.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X