ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 24 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

|
Google Oneindia Kannada News

ನವದೆಹಲಿ, ಮೇ 24: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 528,395,428ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,302,057 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 498,820,106 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಅಲ್ಲಿ-ಇಲ್ಲಿ ಸುದ್ದಿ: ಅಲ್ಲಿ 5ನೇ ಅಲೆಗೆ ಕಾರಣವಾದ ಓಮಿಕ್ರಾನ್ ಉಪ ತಳಿ ಬಿಎ.4 ಇಲ್ಲಿ ಪತ್ತೆ!ಅಲ್ಲಿ-ಇಲ್ಲಿ ಸುದ್ದಿ: ಅಲ್ಲಿ 5ನೇ ಅಲೆಗೆ ಕಾರಣವಾದ ಓಮಿಕ್ರಾನ್ ಉಪ ತಳಿ ಬಿಎ.4 ಇಲ್ಲಿ ಪತ್ತೆ!

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 24ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1,675 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1,675 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 1,675 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 31 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 1,635 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,140,068ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,600,737 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.75ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,490 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 14,841 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.03ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 527,799,496 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,300,434 ಮಂದಿ ಪ್ರಾಣ ಬಿಟ್ಟಿದ್ದಾರೆ. 498,043,212 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,455,850 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,51,13,962

ಭಾರತ: 4,31,40,068

ಬ್ರೆಜಿಲ್: 3,08,03,995

ಫ್ರಾನ್ಸ್: 2,93,59,336

ಜರ್ಮನಿ: 2,61,03,628

ಯುಕೆ: 2,22,38,715

ರಷ್ಯಾ: 1,82,97,608

ದಕ್ಷಿಣ ಕೊರಿಯಾ: 1,79,93,985

ಇಟಲಿ: 1,72,57,573

ಟರ್ಕಿ: 1,50,63,203

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,29,121

ಬ್ರೆಜಿಲ್: 6,65,727

ಭಾರತ: 5,24,490

ರಷ್ಯಾ: 3,78,426

ಮೆಕ್ಸಿಕೋ: 3,24,768

ಪೆರು: 2,13,106

ಯುಕೆ: 1,77,977

ಇಟಲಿ: 1,66,032

ಇಂಡೋನೇಷಿಯಾ: 1,56,534

ಫ್ರಾನ್ಸ್: 1,47,917

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,17,01,524

ಭಾರತ: 4,26,00,737

ಬ್ರೆಜಿಲ್: 2,98,51,917

ಫ್ರಾನ್ಸ್: 2,86,09,848

ಜರ್ಮನಿ: 2,48,32,300

ಯುಕೆ: 2,18,50,869

ರಷ್ಯಾ: 1,76,94,020

ಟರ್ಕಿ: 1,49,61,011

ಸ್ಪೇನ್: 1,16,20,275

ಅರ್ಜೆಂಟೀನಾ: 88,95,999

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on May 24rd the total cases are at 528,395,428 with death is 6,302,057. The total number of recoveries is 498,820,106.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X