ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 26 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

|
Google Oneindia Kannada News

ನವದೆಹಲಿ, ಮೇ 26: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 529,851,295ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,306,527 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 500,348,368 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಕೊರೊನಾ ಹೋಯ್ತು, ಮಂಕಿಫಾಕ್ಸ್ ಬಂತು; ಎರಡು ರೋಗಗಳ ಮಧ್ಯೆ ಏನಿದು ನಂಟು!?ಕೊರೊನಾ ಹೋಯ್ತು, ಮಂಕಿಫಾಕ್ಸ್ ಬಂತು; ಎರಡು ರೋಗಗಳ ಮಧ್ಯೆ ಏನಿದು ನಂಟು!?

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 26ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,628 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,628 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 2,628 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 18 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,167 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,144,820ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,604,881 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.75ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,525 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 15,414 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.03ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 529,851,295 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,306,527 ಮಂದಿ ಪ್ರಾಣ ಬಿಟ್ಟಿದ್ದಾರೆ. 500,348,368 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,196,400 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,54,40,340

ಭಾರತ: 4,31,44,820

ಬ್ರೆಜಿಲ್: 3,08,46,602

ಫ್ರಾನ್ಸ್: 2,94,13,371

ಜರ್ಮನಿ: 2,62,05,002

ಯುಕೆ: 2,22,76,975

ರಷ್ಯಾ: 1,83,05,973

ದಕ್ಷಿಣ ಕೊರಿಯಾ: 1,80,36,720

ಇಟಲಿ: 1,73,12,432

ಟರ್ಕಿ: 1,50,65,767

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,30,415

ಬ್ರೆಜಿಲ್: 6,66,112

ಭಾರತ: 5,24,525

ರಷ್ಯಾ: 3,78,609

ಮೆಕ್ಸಿಕೋ: 3,24,768

ಪೆರು: 2,13,134

ಯುಕೆ: 1,78,313

ಇಟಲಿ: 1,66,264

ಇಂಡೋನೇಷಿಯಾ: 1,56,553

ಫ್ರಾನ್ಸ್: 1,48,056

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,18,51,405

ಭಾರತ: 4,26,04,881

ಬ್ರೆಜಿಲ್: 2,98,95,469

ಫ್ರಾನ್ಸ್: 2,87,01,859

ಜರ್ಮನಿ: 2,50,16,800

ಯುಕೆ: 2,18,75,156

ರಷ್ಯಾ: 1,77,07,077

ಟರ್ಕಿ: 1,49,63,420

ಸ್ಪೇನ್: 1,16,79,931

ಅರ್ಜೆಂಟೀನಾ: 88,95,999

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on May 26th the total cases are at 529,851,295 with death is 6,306,527. The total number of recoveries is 500,348,368.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X