• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೇ 27ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

|
Google Oneindia Kannada News

ನವದೆಹಲಿ, ಮೇ 27: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 530,474,160ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,308,158 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 500,348,368 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

Breaking: ಭಾರತದಲ್ಲಿ ಕೊರೊನಾದಿಂದ 30 ನಿಮಿಷಕ್ಕೆ ಒಬ್ಬರು ಸಾವು!Breaking: ಭಾರತದಲ್ಲಿ ಕೊರೊನಾದಿಂದ 30 ನಿಮಿಷಕ್ಕೆ ಒಬ್ಬರು ಸಾವು!

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 27ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,710 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,710 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 2,710 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 14 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,296 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,147,530ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,607,177 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.75ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,539 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 15,814 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.03ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 530,474,160 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,308,158 ಮಂದಿ ಪ್ರಾಣ ಬಿಟ್ಟಿದ್ದಾರೆ. 501,069,989 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,096,013 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,55,70,755

ಭಾರತ: 4,31,47,530

ಬ್ರೆಜಿಲ್: 3,08,80,512

ಫ್ರಾನ್ಸ್: 2,94,34,605

ಜರ್ಮನಿ: 2,62,39,641

ಯುಕೆ: 2,22,76,975

ರಷ್ಯಾ: 1,83,15,292

ದಕ್ಷಿಣ ಕೊರಿಯಾ: 1,80,53,287

ಇಟಲಿ: 1,73,33,299

ಟರ್ಕಿ: 1,50,67,077

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,30,775

ಬ್ರೆಜಿಲ್: 6,66,248

ಭಾರತ: 5,24,539

ರಷ್ಯಾ: 3,78,784

ಮೆಕ್ಸಿಕೋ: 3,24,768

ಪೆರು: 2,13,145

ಯುಕೆ: 1,78,313

ಇಟಲಿ: 1,66,358

ಇಂಡೋನೇಷಿಯಾ: 1,56,556

ಫ್ರಾನ್ಸ್: 1,48,084

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,19,37,406

ಭಾರತ: 4,26,07,177

ಬ್ರೆಜಿಲ್: 2,99,17,271

ಫ್ರಾನ್ಸ್: 2,87,42,055

ಜರ್ಮನಿ: 2,50,86,300

ಯುಕೆ: 2,18,85,147

ರಷ್ಯಾ: 1,77,19.596

ಟರ್ಕಿ: 1,49,64,709

ಸ್ಪೇನ್: 1,16,79,931

ಅರ್ಜೆಂಟೀನಾ: 88,95,999

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on May 27th the total cases are at 530,474,160, with death is 6,308,158. The total number of recoveries is 501,069,989.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X