ಮೇ 30ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ನವದೆಹಲಿ, ಮೇ 30: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 531,758,171ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,311,121 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 502,680,048 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 30ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,706 ಮಂದಿಗೆ ಕೊವಿಡ್
ಕಳೆದ 24 ಗಂಟೆಗಳಲ್ಲಿ 2,706 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದ 25 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,070 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,155,749ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,613,440 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.75ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,611 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 17,698 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.03ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 531,758,171 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,311,121 ಮಂದಿ ಪ್ರಾಣ ಬಿಟ್ಟಿದ್ದಾರೆ. 502,680,048 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 22,767,002 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,57,16,214
ಭಾರತ: 4,31,55,749
ಬ್ರೆಜಿಲ್: 3,09,53,579
ಫ್ರಾನ್ಸ್: 2,94,79,438
ಜರ್ಮನಿ: 2,62,86,888
ಯುಕೆ: 2,22,77,696
ರಷ್ಯಾ: 1,83,24,036
ದಕ್ಷಿಣ ಕೊರಿಯಾ: 1,80,86,462
ಇಟಲಿ: 1,73,88,877
ಟರ್ಕಿ: 1,50,70,864

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,31,273
ಬ್ರೆಜಿಲ್: 6,66,496
ಭಾರತ: 5,24,611
ರಷ್ಯಾ: 3,78,955
ಮೆಕ್ಸಿಕೋ: 3,24,768
ಪೆರು: 2,13,173
ಯುಕೆ: 1,78,465
ಇಟಲಿ: 1,66,569
ಇಂಡೋನೇಷಿಯಾ: 1,56,574
ಫ್ರಾನ್ಸ್: 1,48,129

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,21,08,352
ಭಾರತ: 4,26,13,440
ಬ್ರೆಜಿಲ್: 2,99,44,585
ಫ್ರಾನ್ಸ್: 2,88,16,646
ಜರ್ಮನಿ: 2,52,16,200
ಯುಕೆ: 2,19,14,250
ರಷ್ಯಾ: 1,77,29,851
ಟರ್ಕಿ: 1,49,69,305
ಸ್ಪೇನ್: 1,17,15,260
ಅರ್ಜೆಂಟೀನಾ: 88,95,999
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications