ಮೇ 05 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಮೇ 05: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 515,455,950ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,270,165 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 470,212,262 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 05ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,992 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,992 ಮಂದಿಗೆ ಕೊವಿಡ್

ಭಾರತದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಎರಡು ಸಾವಿರದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ 2,992 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 55 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 3,010 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,091,393ಕ್ಕೆ ಏರಿಕೆಯಾಗಿದೆ. ಈ ಪೈಕಿ 42,547,699 ಸೋಂಕಿತರು ಗುಣಮುಖರಾಗಿದ್ದರೆ, 523,975 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 19,719 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 515,455,950 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,270,165 ಮಂದಿ ಪ್ರಾಣ ಬಿಟ್ಟಿದ್ದಾರೆ. 470,212,262 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 38,973,523 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,33,56,490

ಭಾರತ: 4,30,91,393

ಬ್ರೆಜಿಲ್: 3,05,02,501

ಫ್ರಾನ್ಸ್: 2,88,05,690

ಜರ್ಮನಿ: 2,51,16,363

ಯುಕೆ: 2,20,90,523

ರಷ್ಯಾ: 1,82,06,167

ದಕ್ಷಿಣ ಕೊರಿಯಾ: 1,74,38,068

ಇಟಲಿ: 1,66,33,911

ಟರ್ಕಿ: 1,50,37,242

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,23,513

ಬ್ರೆಜಿಲ್: 6,63,816

ಭಾರತ: 5,23,975

ರಷ್ಯಾ: 3,76,421

ಮೆಕ್ಸಿಕೋ: 3,24,350

ಪೆರು: 2,12,891

ಯುಕೆ: 1,75,546

ಇಟಲಿ: 1,64,041

ಇಂಡೋನೇಷಿಯಾ: 1,56,321

ಫ್ರಾನ್ಸ್: 1,46,376

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,08,36,418

ಭಾರತ: 4,25,47,699

ಬ್ರೆಜಿಲ್: 2,96,02,372

ಫ್ರಾನ್ಸ್: 2,73,01,021

ಜರ್ಮನಿ: 2,30,00,,500

ಯುಕೆ: 2,13,95,888

ರಷ್ಯಾ: 1,75,69,936

ಟರ್ಕಿ: 1,49,34,029

ಅರ್ಜೆಂಟೀನಾ: 88,95,999

ಇರಾನ್: 69,94,857

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+