ಮೇ 06 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಮೇ 06: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 515,970,486ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,272,479 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 470,785,914 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 06ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 3,155 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 3,155 ಮಂದಿಗೆ ಕೊವಿಡ್

ಭಾರತದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಎರಡು ಸಾವಿರದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ 3,155 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಸಾವಿನ ಪ್ರಕರಣ ಮತ್ತು ಗುಣಮುಖರ ಕುರಿತು ಯಾವುದೇ ಅಂಕಿ-ಅಂಶಗಳು ಲಭ್ಯವಾಗಿಲ್ಲ. ಅದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,094,548ಕ್ಕೆ ಏರಿಕೆಯಾಗಿದೆ. ಈ ಪೈಕಿ 42,547,699 ಸೋಂಕಿತರು ಗುಣಮುಖರಾಗಿದ್ದರೆ, 523,975 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 22,874 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 515,970,486 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,272,479 ಮಂದಿ ಪ್ರಾಣ ಬಿಟ್ಟಿದ್ದಾರೆ. 470,785,914 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 38,912,093 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,34,37,158

ಭಾರತ: 4,30,94,548

ಬ್ರೆಜಿಲ್: 3,05,24,183

ಫ್ರಾನ್ಸ್: 2,88,49,915

ಜರ್ಮನಿ: 2,52,03,564

ಯುಕೆ: 2,21,02,983

ರಷ್ಯಾ: 1,82,11,178

ದಕ್ಷಿಣ ಕೊರಿಯಾ: 1,74,64,782

ಇಟಲಿ: 1,66,82,626

ಟರ್ಕಿ: 1,50,38,495

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,23,908

ಬ್ರೆಜಿಲ್: 6,63,967

ಭಾರತ: 5,23,975

ರಷ್ಯಾ: 3,76,560

ಮೆಕ್ಸಿಕೋ: 3,24,350

ಪೆರು: 2,12,906

ಯುಕೆ: 1,75,984

ಇಟಲಿ: 1,64,179

ಇಂಡೋನೇಷಿಯಾ: 1,56,340

ಫ್ರಾನ್ಸ್: 1,46,498

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,08,72,122

ಭಾರತ: 4,25,47,699

ಬ್ರೆಜಿಲ್: 2,96,09,094

ಫ್ರಾನ್ಸ್: 2,74,26,293

ಜರ್ಮನಿ: 2,31,35,500

ಯುಕೆ: 2,14,28,440

ರಷ್ಯಾ: 1,75,78,659

ಟರ್ಕಿ: 1,49,35,811

ಅರ್ಜೆಂಟೀನಾ: 88,95,999

ಇರಾನ್: 69,97,050

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+