ಮೇ 07 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಮೇ 07: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 516,685,069ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,275,035 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 471,358,723 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 07ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 4,195 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 4,195 ಮಂದಿಗೆ ಕೊವಿಡ್

ಭಾರತದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಎರಡು ಸಾವಿರದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ 4,195 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಮಹಾಮಾರಿಗೆ 22 ಮಂದಿ ಪ್ರಾಣ ಬಿಟ್ಟಿದ್ದರೆ, 6,717 ಸೋಂಕಿತರು ಗುಣಮುಖರಾಗಿದ್ದಾರೆ. ಅದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,098,743ಕ್ಕೆ ಏರಿಕೆಯಾಗಿದೆ. ಈ ಪೈಕಿ 42,554,416 ಸೋಂಕಿತರು ಗುಣಮುಖರಾಗಿದ್ದರೆ, 524,024 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 20,303 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 516,685,069 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,275,035 ಮಂದಿ ಪ್ರಾಣ ಬಿಟ್ಟಿದ್ದಾರೆ. 471,358,723 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 39,051,311 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,35,34,060

ಭಾರತ: 4,30,98,743

ಬ್ರೆಜಿಲ್: 3,05,43,908

ಫ್ರಾನ್ಸ್: 2,88,90,139

ಜರ್ಮನಿ: 2,52,89,590

ಯುಕೆ: 2,21,14,034

ರಷ್ಯಾ: 1,82,16,719

ದಕ್ಷಿಣ ಕೊರಿಯಾ: 1,75,04,334

ಇಟಲಿ: 1,67,26,990

ಟರ್ಕಿ: 1,50,40,238

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,24,386

ಬ್ರೆಜಿಲ್: 6,64,143

ಭಾರತ: 5,24,024

ರಷ್ಯಾ: 3,76,696

ಮೆಕ್ಸಿಕೋ: 3,24,350

ಪೆರು: 2,12,913

ಯುಕೆ: 1,76,212

ಇಟಲಿ: 1,64,304

ಇಂಡೋನೇಷಿಯಾ: 1,56,357

ಫ್ರಾನ್ಸ್: 1,46,608

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,09,10,509

ಭಾರತ: 4,25,54,416

ಬ್ರೆಜಿಲ್: 2,96,12,822

ಫ್ರಾನ್ಸ್: 2,75,37,766

ಜರ್ಮನಿ: 2,32,06,000

ಯುಕೆ: 2,14,56,172

ರಷ್ಯಾ: 1,75,88,067

ಟರ್ಕಿ: 1,49,38,050

ಅರ್ಜೆಂಟೀನಾ: 88,95,999

ಇರಾನ್: 69,99,709

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+