Infographics: ಅ.1ರಂದು ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ ಬಗ್ಗೆ ತಿಳಿಯಿರಿ
ನವದೆಹಲಿ, ಅಕ್ಟೋಬರ್ 01: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 623,053,394ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,549,579 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 602,811,151 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಮೂರು ಸಾವಿರದ ಆಸುಪಾಸಿನಲ್ಲಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಅಕ್ಟೋಬರ್ 01ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 3,805 ಮಂದಿಗೆ ಕೊವಿಡ್
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,805 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 26 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 5,069 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,591,112ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,655 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 44,024,164 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 38,293 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 623,053,394 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,549,579 ಮಂದಿ ಪ್ರಾಣ ಬಿಟ್ಟಿದ್ದಾರೆ. 602,811,151 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 13,692,664 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 9,82,32,353
ಭಾರತ: 4,45,91,112
ಫ್ರಾನ್ಸ್: 3,52,91,211
ಬ್ರೆಜಿಲ್ : 3,47,15,149
ಜರ್ಮನಿ: 3,33,86,229
ದಕ್ಷಿಣ ಕೊರಿಯಾ: 2,47,96,014
ಯುಕೆ: 2,36,72,855
ಇಟಲಿ: 2,24,67,278
ಜಪಾನ್: 2,13,01,280
ರಷ್ಯಾ: 2,10,18,942

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,84,803
ಬ್ರೆಜಿಲ್: 6,86,097
ಭಾರತ: 5,28,655
ರಷ್ಯಾ: 3,87,372
ಮೆಕ್ಸಿಕೋ: 3,30,112
ಪೆರು: 2,16,575
ಯುಕೆ: 1,90,317
ಇಟಲಿ: 1,77,092
ಇಂಡೋನೇಷಿಯಾ: 1,58,112
ಫ್ರಾನ್ಸ್: 1,55,112

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 9,50,42,116
ಭಾರತ: 4,40,24,164
ಫ್ರಾನ್ಸ್: 3,45,46,598
ಬ್ರೆಜಿಲ್: 3,38,53,693
ಜರ್ಮನಿ: 3,23,27,200
ಯುಕೆ: 2,33,51,316
ಇಟಲಿ: 2,18,48,242
ರಷ್ಯಾ: 2,00,93,616
ಜಪಾನ್: 2,03,93,893
ಸ್ಪೇನ್: 1,32,25,964
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications