ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಅ.3ರಂದು ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ ಬಗ್ಗೆ ತಿಳಿಯಿರಿ

|
Google Oneindia Kannada News

ನವದೆಹಲಿ, ಅಕ್ಟೋಬರ್ 03: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 623,596,113ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,551,107 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 603,621,977 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಸಂಪೂರ್ಣ ಚಿತ್ರಣವೇ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಮೂರು ಸಾವಿರದ ಆಸುಪಾಸಿನಲ್ಲಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಅಕ್ಟೋಬರ್ 03ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 3,011 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 3,011 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,011 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 28 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 4,301 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,597,498ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,701 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 44,032,671 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 36,126 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 623,596,113 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,551,107 ಮಂದಿ ಪ್ರಾಣ ಬಿಟ್ಟಿದ್ದಾರೆ. 603,621,977 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 13,423,029 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,82,54,659

ಭಾರತ: 4,45,97,498

ಫ್ರಾನ್ಸ್: 3,54,75,260

ಬ್ರೆಜಿಲ್ : 3,47,21,228

ಜರ್ಮನಿ: 3,33,86,229

ದಕ್ಷಿಣ ಕೊರಿಯಾ: 2,48,31,761

ಯುಕೆ: 2,36,72,855

ಇಟಲಿ: 2,25,29,252

ಜಪಾನ್: 2,13,45,939

ರಷ್ಯಾ: 2,10,73,185

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,84,893

ಬ್ರೆಜಿಲ್: 6,86,366

ಭಾರತ: 5,28,701

ರಷ್ಯಾ: 3,87,559

ಮೆಕ್ಸಿಕೋ: 3,30,131

ಪೆರು: 2,16,596

ಯುಕೆ: 1,90,317

ಇಟಲಿ: 1,77,150

ಇಂಡೋನೇಷಿಯಾ: 1,58,132

ಫ್ರಾನ್ಸ್: 1,55,112

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 9,51,88,388

ಭಾರತ: 4,40,32,671

ಫ್ರಾನ್ಸ್: 3,45,67,599

ಬ್ರೆಜಿಲ್: 3,38,53,693

ಜರ್ಮನಿ: 3,23,82,900

ಯುಕೆ: 2,33,60,723

ಇಟಲಿ: 2,18,84,153

ರಷ್ಯಾ: 2,01,75,902

ಜಪಾನ್: 2,04,00,911

ಸ್ಪೇನ್: 1,32,25,964

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on October 3rd the total cases are at 623,596,113, with death is 6,551,107. The total number of recoveries is 603,621,977.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X