ಏಪ್ರಿಲ್ 28: ವಿಶ್ವದೆಲ್ಲೆಡೆ ಕೋವಿಡ್19ರಿಂದ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಏಪ್ರಿಲ್ 28: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 511,940,844 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 465,742,915 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 471,998,107 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಜನವರಿ 10, 2022ರಿಂದ ವೈದ್ಯಕೀಯ ಸಿಬ್ಬಂದಿಗೆ ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ, ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ಭೀತಿ ನಡುವೆ ಭಾರತದಲ್ಲಿ 15 ವರ್ಷದಿಂದ 18 ವರ್ಷದ ಮಕ್ಕಳಿಗೂ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಭಾರತದಲ್ಲಿ 2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಯಿತು. ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 28ರ ಪ್ರಕಾರ) ಇಲ್ಲಿದೆ.

 ಭಾರತದಲ್ಲಿ 24 ಗಂಟೆಗಳಲ್ಲಿ 26, 988 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 26, 988 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3303 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 4,30,68,799ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 5,23,693 ಕ್ಕೆ ಏರಿಕೆಯಾಗಿದೆ, 4,25,28,126 ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 2,563 ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

 ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಫೆಬ್ರವರಿ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 432,910,950 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 5,951,704ಕ್ಕೇರಿದೆ. ಒಟ್ಟಾರೆ, 362,468,124 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 64,491,122 ಸಕ್ರಿಯ ಪಾಸಿಟಿವ್ 78,621 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 368,419,828 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

 ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ವಿಶ್ವದಲ್ಲಿ ಕೊವಿಡ್ 19 ಬಾಧಿತ ಟಾಪ್ 10
ಯುಎಸ್ಎ: 82888247 ಪ್ರಕರಣಗಳು
ಭಾರತ: 43068799
ಬ್ರೆಜಿಲ್: 30399004
ಫ್ರಾನ್ಸ್: 28483124
ಜರ್ಮನಿ: 24488242
ಯುಕೆ: 2,2011920
ರಷ್ಯಾ: 18159600
ಸೌತ್ ಕೊರಿಯಾ: 17144065
ಇಟಲಿ: 16279754
ಟರ್ಕಿ: 15026141

 ಕೊವಿಡ್ ಮೃತಪಟ್ಟವರನ್ನು ಹೊಂದಿರುವ ದೇಶಗಳು

ಕೊವಿಡ್ ಮೃತಪಟ್ಟವರನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 1019774
ಬ್ರೆಜಿಲ್: 663165
ಭಾರತ: 523693
ರಷ್ಯಾ: 375400
ಮೆಕ್ಸಿಕೋ: 324221
ಪೆರು: 212778
ಯುಕೆ: 174448
ಇಟಲಿ: 163113
ಇಂಡೋನೇಷಿಯಾ: 156199
ಫ್ರಾನ್ಸ್: 145579

 ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ: 80585919
ಭಾರತ: 42528126
ಬ್ರೆಜಿಲ್: 29480998
ಫ್ರಾನ್ಸ್: 26403684
ಜರ್ಮನಿ: 22088300
ಯುಕೆ: 21083398
ರಷ್ಯಾ: 17506859
ಟರ್ಕಿ: 14916782
ಅರ್ಜೆಂಟೀನಾ: 8895999
ಇರಾನ್: 6975147

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+