Infographics: ಸೆಪ್ಟೆಂಬರ್ 10ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ

ನವದೆಹಲಿ, ಸೆಪ್ಟೆಂಬರ್ 10: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 613,263,664ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,515,119 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 591,579,185 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಸೆಪ್ಟೆಂಬರ್ 10ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 5554 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 5554 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5554 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 36 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 6322 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,490,283ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,139 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 43,913,294 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 48,850 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 3,76,855 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 88,90,87,642 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 613,263,664 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,515,119 ಮಂದಿ ಪ್ರಾಣ ಬಿಟ್ಟಿದ್ದಾರೆ. 591,579,185 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 15,169,360 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,70,26,001

ಭಾರತ: 4,44,90,283

ಫ್ರಾನ್ಸ್: 3,46,82,193

ಬ್ರೆಜಿಲ್ : 3,45,63,920

ಜರ್ಮನಿ: 3,24,52,250

ದಕ್ಷಿಣ ಕೊರಿಯಾ: 2,39,76,673

ಯುಕೆ: 2,35,54,519

ಇಟಲಿ: 2,20,20,154

ರಷ್ಯಾ: 1,99,82,056

ಜಪಾನ್: 1,99,60,295

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,75,338

ಬ್ರೆಜಿಲ್: 6,84,866

ಭಾರತ: 5,28,139

ರಷ್ಯಾ: 3,85,165

ಮೆಕ್ಸಿಕೋ: 3,29,735

ಪೆರು: 2,16,045

ಯುಕೆ: 1,89,026

ಇಟಲಿ: 1,76,157

ಇಂಡೋನೇಷಿಯಾ: 1,57,741

ಫ್ರಾನ್ಸ್: 1,54,468

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 9,30,51,434

ಭಾರತ: 4,39,13,294

ಫ್ರಾನ್ಸ್: 3,41,85,324

ಬ್ರೆಜಿಲ್: 3,36,12,456

ಜರ್ಮನಿ: 3,16,52,800

ಯುಕೆ: 2,32,61,550

ಇಟಲಿ: 2,13,41,186

ರಷ್ಯಾ: 1,89,77,695

ಜಪಾನ್: 1,87,74,642

ಸ್ಪೇನ್: 1,31,63,833

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+