ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಜಗತ್ತಿನಲ್ಲಿ ಕೊರೊನಾವೈರಸ್ ಅಪಾಯ ಎಷ್ಟರ ಮಟ್ಟಿಗೆ ಇದೆ ಗೊತ್ತಾ?

|
Google Oneindia Kannada News

ವದೆಹಲಿ, ಸೆಪ್ಟೆಂಬರ್ 17: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 616,766,994ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,529,663 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 596,133,003 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಸೆಪ್ಟೆಂಬರ್ 17ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 5747 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 5747 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5747 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 29 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 5,618 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,528,524ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,302 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 43,953,374 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 46,848 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 616,766,994 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,529,663 ಮಂದಿ ಪ್ರಾಣ ಬಿಟ್ಟಿದ್ದಾರೆ. 596,133,003 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 14,104,328 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,74,81,146

ಭಾರತ: 4,45,28,524

ಫ್ರಾನ್ಸ್: 3,48,60,085

ಬ್ರೆಜಿಲ್ : 3,46,21,481

ಜರ್ಮನಿ: 3,26,80,355

ದಕ್ಷಿಣ ಕೊರಿಯಾ: 2,43,59,702

ಯುಕೆ: 2,35,85,305

ಇಟಲಿ: 2,21,31,785

ರಷ್ಯಾ: 2,05,66,116

ಜಪಾನ್: 2,03,24,039

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,78,457

ಬ್ರೆಜಿಲ್: 6,85,350

ಭಾರತ: 5,28,302

ರಷ್ಯಾ: 3,85,837

ಮೆಕ್ಸಿಕೋ: 3,29,868

ಪೆರು: 2,16,264

ಯುಕೆ: 1,89,484

ಇಟಲಿ: 1,76,508

ಇಂಡೋನೇಷಿಯಾ: 1,57,876

ಫ್ರಾನ್ಸ್: 1,54,672

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 9,37,91,221

ಭಾರತ: 4,39,53,374

ಫ್ರಾನ್ಸ್: 3,43,10,015

ಬ್ರೆಜಿಲ್: 3,37,06,231

ಜರ್ಮನಿ: 3,18,94,500

ಯುಕೆ: 2,32,93,840

ಇಟಲಿ: 2,15,29,555

ರಷ್ಯಾ: 1,92,94,876

ಜಪಾನ್: 1,96,35,346

ಸ್ಪೇನ್: 1,31,89,537

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on September 17th the total cases are at 616,766,994, with death is 6,529,663. The total number of recoveries is 596,133,003.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X