• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಸೆ.28ರಂದು ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ ಬಗ್ಗೆ ತಿಳಿಯಿರಿ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 28: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 621,334,527ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,543,152 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 601,527,760 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

Khosta 2 Virus: ಕೊರೊನಾ ವೈರಸ್ ರೀತಿಯಲ್ಲೇ ಭಯ ಹುಟ್ಟಿಸುವ ಖೋಸ್ಟ್-2 ವೈರಸ್!Khosta 2 Virus: ಕೊರೊನಾ ವೈರಸ್ ರೀತಿಯಲ್ಲೇ ಭಯ ಹುಟ್ಟಿಸುವ ಖೋಸ್ಟ್-2 ವೈರಸ್!

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಮೂರು ಸಾವಿರದ ಆಸುಪಾಸಿನಲ್ಲಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಸೆಪ್ಟೆಂಬರ್ 28ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 3,615 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 3,615 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,615 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 22 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 4,972 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,579,088ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,584 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 44,009,525 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 40,979 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 621,334,527 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,543,152 ಮಂದಿ ಪ್ರಾಣ ಬಿಟ್ಟಿದ್ದಾರೆ. 601,527,760 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 13,263,615 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,79,91,494

ಭಾರತ: 4,45,79,088

ಫ್ರಾನ್ಸ್: 3,52,38,174

ಬ್ರೆಜಿಲ್ : 3,46,88,063

ಜರ್ಮನಿ: 3,31,37,143

ದಕ್ಷಿಣ ಕೊರಿಯಾ: 2,47,09,789

ಯುಕೆ: 2,36,21,952

ಇಟಲಿ: 2,23,58,487

ಜಪಾನ್: 2,11,18,325

ರಷ್ಯಾ: 2,08,69,714

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,82,286

ಬ್ರೆಜಿಲ್: 6,85,930

ಭಾರತ: 5,28,584

ರಷ್ಯಾ: 3,86,943

ಮೆಕ್ಸಿಕೋ: 3,30,048

ಪೆರು: 2,16,526

ಯುಕೆ: 1,89,919

ಇಟಲಿ: 1,76,976

ಇಂಡೋನೇಷಿಯಾ: 1,58,057

ಫ್ರಾನ್ಸ್: 1,55,000

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 9,47,63,093

ಭಾರತ: 4,40,09,525

ಫ್ರಾನ್ಸ್: 3,44,88,240

ಬ್ರೆಜಿಲ್: 3,38,18,040

ಜರ್ಮನಿ: 3,22,51,900

ಯುಕೆ: 2,33,39,985

ಇಟಲಿ: 2,17,37,122

ರಷ್ಯಾ: 1,98,60,311

ಜಪಾನ್: 2,03,80,089

ಸ್ಪೇನ್: 1,32,18,892

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on September 28th the total cases are at 621,334,527, with death is 6,543,152. The total number of recoveries is 601,527,760.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X