Get Updates
Get notified of breaking news, exclusive insights, and must-see stories!

Infographics: ಸೆ.29ರಂದು ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ ಬಗ್ಗೆ ತಿಳಿಯಿರಿ

ನವದೆಹಲಿ, ಸೆಪ್ಟೆಂಬರ್ 29: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 621,964,233ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,545,736 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 601,923,636 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಮೂರು ಸಾವಿರದ ಆಸುಪಾಸಿನಲ್ಲಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಸೆಪ್ಟೆಂಬರ್ 29ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 4,272 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 4,272 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,272 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 27 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 4,474 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,583,360ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,611 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 44,013,999 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 40,750 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 621,964,233 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,545,736 ಮಂದಿ ಪ್ರಾಣ ಬಿಟ್ಟಿದ್ದಾರೆ. 601,923,636 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 13,494,861 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,80,04,113

ಭಾರತ: 4,45,83,360

ಫ್ರಾನ್ಸ್: 3,52,91,584

ಬ್ರೆಜಿಲ್ : 3,46,96,863

ಜರ್ಮನಿ: 3,32,16,006

ದಕ್ಷಿಣ ಕೊರಿಯಾ: 2,47,40,635

ಯುಕೆ: 2,36,21,952

ಇಟಲಿ: 2,23,95,282

ಜಪಾನ್: 2,12,29,216

ರಷ್ಯಾ: 2,09,48,470

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,83,798

ಬ್ರೆಜಿಲ್: 6,85,978

ಭಾರತ: 5,28,611

ರಷ್ಯಾ: 3,87,163

ಮೆಕ್ಸಿಕೋ: 3,30,048

ಪೆರು: 2,16,539

ಯುಕೆ: 1,89,919

ಇಟಲಿ: 1,77,024

ಇಂಡೋನೇಷಿಯಾ: 1,58,076

ಫ್ರಾನ್ಸ್: 1,55,045

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 9,48,55,749

ಭಾರತ: 4,40,13,999

ಫ್ರಾನ್ಸ್: 3,45,08,061

ಬ್ರೆಜಿಲ್: 3,38,38,636

ಜರ್ಮನಿ: 3,22,84,200

ಯುಕೆ: 2,33,44,215

ಇಟಲಿ: 2,17,58,885

ರಷ್ಯಾ: 1,99,79,763

ಜಪಾನ್: 2,03,80,089

ಸ್ಪೇನ್: 1,32,18,892

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+