ಆ.31: ವಿಶ್ವದಲ್ಲಿ ಕೊವಿಡ್19 ರಿಂದ ಗುಣಮುಖ ಹೊಂದಿದವರೆಷ್ಟು?

ಬೆಂಗಳೂರು, ಆಗಸ್ಟ್ 31: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 218,223,304ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 195,117,527ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 199,645,847 ಪ್ರಕರಣಗಳು ಮುಕ್ತಾಯಗೊಂಡಿವೆ.

2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಗಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಕೋವಿಡ್-19 ಲಸಿಕೀಕರಣ ವ್ಯಾಪ್ತಿ ಮತ್ತು ವೇಗವನ್ನು ವೃದ್ಧಿಸಲು ಬದ್ಧವಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 31) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 36,244 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 36,244 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 30,351ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 32,810,815ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 439,051ಕ್ಕೆ ಏರಿಕೆಯಾಗಿದೆ, 31,986,075 ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 36,244ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.68%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

113,689 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ

113,689 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ

ಆಗಸ್ಟ್ 31ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 218,223,304ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,528,320 ಕ್ಕೇರಿದೆ. ಒಟ್ಟಾರೆ, 195,117,527 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,577,457 ಸಕ್ರಿಯ ಪಾಸಿಟಿವ್ 113,689 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 199,645,847 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 39,953,651ಪ್ರಕರಣಗಳು
ಭಾರತ: 32,808,018
ಬ್ರೆಜಿಲ್: 20,752,281
ರಷ್ಯಾ: 6,918,965
ಯುಕೆ: 6,789,581
ಫ್ರಾನ್ಸ್: 6,746,283
ಟರ್ಕಿ: 6,366,438
ಅರ್ಜೆಂಟೀನಾ: 5,178,889
ಇರಾನ್: 4,992,063
ಕೊಲಂಬಿಯಾ: 4,907,264

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 656,482
ಬ್ರೆಜಿಲ್: 579,643
ಭಾರತ: 438,962
ಮೆಕ್ಸಿಕೋ: 258,491
ರಷ್ಯಾ: 183,224
ಯುಕೆ: 132,535
ಇಟಲಿ: 129,221
ಕೊಲಂಬಿಯಾ: 124,883
ಫ್ರಾನ್ಸ್: 114,308
ಅರ್ಜೆಂಟೀನಾ: 111,607

ಅತಿ ಹೆಚ್ಚು ಗುಣಮುಖರಾದವರು

ಅತಿ ಹೆಚ್ಚು ಗುಣಮುಖರಾದವರು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,982,180
ಯುಎಸ್ಎ: 30,945,115
ಬ್ರೆಜಿಲ್: 19,692,898
ಫ್ರಾನ್ಸ್: 6,225,201
ರಷ್ಯಾ: 6,181,054
ಟರ್ಕಿ: 5,823,111
ಯುಕೆ: 5,466,316
ಅರ್ಜೆಂಟೀನಾ: 4,869,104
ಕೊಲಂಬಿಯಾ: 4,737,467
ಸ್ಪೇನ್: 4,362,898
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+