ಕೋವಿಡ್ 19: ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ದರ 1.55%ಗೆ ಕುಸಿತ
ಬೆಂಗಳೂರು, ಆಗಸ್ಟ್ 24: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 213,586,733ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 191,133,788ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 195,592,451 ಪ್ರಕರಣಗಳು ಮುಕ್ತಾಯಗೊಂಡಿವೆ.
2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಗಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಕೋವಿಡ್-19 ಲಸಿಕೀಕರಣ ವ್ಯಾಪ್ತಿ ಮತ್ತು ವೇಗವನ್ನು ವೃದ್ಧಿಸಲು ಬದ್ಧವಾಗಿದೆ.
ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 39,486 ರೋಗಿಗಳು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ ಒಟ್ಟು 3,17,20,112 ಜನರು ಗುಣಮುಖರಾಗಿದ್ದಾರೆ. ಇದರ ಫಲವಾಗಿ, ಭಾರತದ ಚೇತರಿಕೆ ದರ 97.68%ಗೆ ಸುಧಾರಣೆ ಕಂಡಿದೆ, 2020 ಮಾರ್ಚ್ ನಿಂದ ಆಗಿರುವ ಗರಿಷ್ಠ ಸುಧಾರಣೆ ಇದಾಗಿದೆ.
ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ ಸುಸ್ಥಿರ ಮತ್ತು ಸಹಭಾಗಿತ್ವದ ಪ್ರಯತ್ನಗಳ ಫಲವಾಗಿ, ದೈನಂದಿನ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ ಕಾಣುತ್ತಿದೆ. ಸತತ 58 ದಿನಗಳಿಂದ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ 50,000 ಮಟ್ಟದಿಂದ ಕೆಳಗಿದೆ. ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 25,467 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 24) ಇಲ್ಲಿದೆ.

ವಾರದ ಪಾಸಿಟಿವಿಟಿ ದರ 1.90%ಗೆ ಇಳಿಕೆ
ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 3,19,551ಕ್ಕೆ ಇಳಿಕೆ ಕಂಡಿದ್ದು, ಸತತ 156 ದಿನಗಳಿಂದ ಕಂಡುಬಂದಿರುವ ಕನಿಷ್ಠ ಪ್ರಮಾಣ ಇದಾಗಿದೆ. ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 1% ಮಟ್ಟದ ಕೆಳಗೆ ಮುಂದುವರಿದಿದ್ದು, ಅದೀಗ 0.98%ಕ್ಕೆ ಇಳಿಕೆ ಕಂಡಿದೆ. 2020 ಮಾರ್ಚ್ ನಿಂದ ಕಂಡುಬಂದಿರುವ ಕನಿಷ್ಠ ಪ್ರಮಾಣ ಇದಾಗಿದೆ.
ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ 1.90%ಗೆ ಇಳಿಕೆ ಕಂಡಿದ್ದು, ಸತತ 60 ದಿನಗಳಿಂದ 3% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ. ದೈನಂದಿನ ಪಾಸಿಟಿವಿಟಿ ದರ 1.55%ಗೆ ಇಳಿದಿದೆ. ಕಳೆದ 29 ದಿನಗಳಿಂದ ದೈನಂದಿನ ಪಾಸಿಟಿವಿಟಿ ದರ 3% ಮಟ್ಟದಿಂದ ಕೆಳಗಿದ್ದರೆ, ನಿರಂತರ 78 ದಿನಗಳಿಂದ ಅದು 5% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 17, 575 ರೋಗಿಗಳು ಚೇತರಿಕೆ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,385 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 32,503,696ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 435,450ಕ್ಕೆ ಏರಿಕೆಯಾಗಿದೆ, 31,738,536ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 17, 575 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.68%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಆಗಸ್ಟ್ 24ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 213,586,733 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,458,663ಕ್ಕೇರಿದೆ. ಒಟ್ಟಾರೆ, 191,133,788 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 17,994,282 ಸಕ್ರಿಯ ಪಾಸಿಟಿವ್ 112,266 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 195,592,451 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 38,818,270ಪ್ರಕರಣಗಳು
ಭಾರತ: 32,503,696
ಬ್ರೆಜಿಲ್: 20,583,994
ರಷ್ಯಾ: 6,785,374
ಫ್ರಾನ್ಸ್: 6,624,777
ಯುಕೆ: 6,524,581
ಟರ್ಕಿ: 6,234,520
ಅರ್ಜೆಂಟೀನಾ: 5,139,966
ಕೊಲಂಬಿಯಾ: 4,892,235
ಸ್ಪೇನ್: 4,794,352

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 646,696
ಬ್ರೆಜಿಲ್: 574,944
ಭಾರತ: 435,450
ಮೆಕ್ಸಿಕೋ: 253,526
ರಷ್ಯಾ: 177,614
ಯುಕೆ: 131,680
ಇಟಲಿ: 128,795
ಕೊಲಂಬಿಯಾ: 124,315
ಫ್ರಾನ್ಸ್: 113,419
ಅರ್ಜೆಂಟೀನಾ: 110,609

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,738,536
ಯುಎಸ್ಎ: 30,570,230
ಬ್ರೆಜಿಲ್: 19,479,947
ಫ್ರಾನ್ಸ್: 6,065,321
ರಷ್ಯಾ: 6,053,503
ಟರ್ಕಿ: 5,724,382
ಯುಕೆ: 5,098,152
ಅರ್ಜೆಂಟೀನಾ: 4,822,420
ಕೊಲಂಬಿಯಾ: 4,721,710
ಇಟಲಿ: 4,224,429
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications