ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ವಿಶ್ವದೆಲ್ಲೆಡೆ ಕೊವಿಡ್19ರಿಂದ ಎಷ್ಟು ಮಂದಿ ಚೇತರಿಕೆ?

|
Google Oneindia Kannada News

ಬೆಂಗಳೂರು, ಜನವರಿ 13: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 318,022,647ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 263,170,424 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 268,703,934 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಜನವರಿ 10, 2022ರಿಂದ ವೈದ್ಯಕೀಯ ಸಿಬ್ಬಂದಿಗೆ ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ, ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ಭೀತಿ ನಡುವೆ ಭಾರತದಲ್ಲಿ 15 ವರ್ಷದಿಂದ 18 ವರ್ಷದ ಮಕ್ಕಳಿಗೂ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಭಾರತದಲ್ಲಿ 2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಯಿತು. ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 13) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 84,825 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 84,825 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 247,147ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 36,317,927ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 485,035ಕ್ಕೆ ಏರಿಕೆಯಾಗಿದೆ, 34,715,361ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 84,825 ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜನವರಿ 13ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 318,022,647 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 5,533,510 ಕ್ಕೇರಿದೆ. ಒಟ್ಟಾರೆ, 263,170,424 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 49,318,713 ಸಕ್ರಿಯ ಪಾಸಿಟಿವ್ 95,907 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 268,703,934 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ವಿಶ್ವದಲ್ಲಿ ಕೊವಿಡ್ 19 ಬಾಧಿತ ಟಾಪ್ 10
ಯುಎಸ್ಎ: 64,359,409 ಪ್ರಕರಣಗಳು
ಭಾರತ: 36,317,927
ಬ್ರೆಜಿಲ್: 22,718,606
ಯುಕೆ: 14,862,138
ಫ್ರಾನ್ಸ್: 12,934,982
ರಷ್ಯಾ: 10,723,305
ಟರ್ಕಿ: 10,195,676
ಇಟಲಿ: 7,971,068
ಸ್ಪೇನ್: 7,771,367
ಜರ್ಮನಿ: 7,750,406

ಕೊವಿಡ್ ಮೃತಪಟ್ಟವರನ್ನು ಹೊಂದಿರುವ ದೇಶಗಳು

ಕೊವಿಡ್ ಮೃತಪಟ್ಟವರನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

  • ಯುಎಸ್ಎ: ಮೃತರ ಸಂಖ್ಯೆ 866,891
  • ಬ್ರೆಜಿಲ್: 620,419
  • ಭಾರತ: 485,035
  • ರಷ್ಯಾ: 319,172
  • ಮೆಕ್ಸಿಕೋ: 300,764
  • ಯುಕೆ: 151,007
  • ಇಂಡೋನೇಷಿಯಾ: 144,155
  • ಇಟಲಿ: 139,872
  • ಕೊಲಂಬಿಯಾ: 130,529
  • ಫ್ರಾನ್ಸ್: 126,305
ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

  • ಯುಎಸ್ಎ: 42,805,090
  • ಭಾರತ: 34,715,361
  • ಬ್ರೆಜಿಲ್: 21,626,836
  • ಯುಕೆ: 11,037,780
  • ರಷ್ಯಾ: 9,784,348
  • ಟರ್ಕಿ: 9,436,662
  • ಫ್ರಾನ್ಸ್: 8,857,455
  • ಜರ್ಮನಿ: 6,878,100
  • ಇರಾನ್: 6,058,586
  • ಅರ್ಜೆಂಟೀನಾ: 5,700,467

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Infographics: The world is seeing a surge in the number of coronavirus cases. As on Jan 13, 2022 the total cases are at 318,022,647 with death is 5,533,510. The total number of recoveries is 263,170,424
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X