ನ. 23: ಕೊವಿಡ್ 19 ಯಾವ ದೇಶದಲ್ಲಿ ಎಷ್ಟು ಸೋಂಕು, ಚೇತರಿಕೆ?

ಬೆಂಗಳೂರು, ನ. 23: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 5.9 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 40,892,476 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 42,288,407 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 91 ಲಕ್ಷಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44, 059 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 511 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,33,738ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 23ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 23ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 59,118,313ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,395,931ಕ್ಕೇರಿದೆ. ಒಟ್ಟಾರೆ, 40,892,476ಮಂದಿ ಗುಣಮುಖರಾಗಿದ್ದಾರೆ. ಒಟ್ಟು 16,829,906ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 102,476 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 42,288,407ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 12,591,402 ಪ್ರಕರಣಗಳು
ಭಾರತ: 9,142,926
ಬ್ರೆಜಿಲ್: 6,071,401
ಫ್ರಾನ್ಸ್: 2,140,208
ರಷ್ಯಾ: 2,114,502
ಸ್ಪೇನ್: 1,589,219
ಯುಕೆ: 1,512,045
ಇಟಲಿ: 1,408,868
ಅರ್ಜೆಂಟೀನಾ: 1,370,366
ಕೊಲಂಬಿಯಾ: 1,248,417

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 262,726
ಬ್ರೆಜಿಲ್: 169,197
ಭಾರತ: 133,824
ಮೆಕ್ಸಿಕೋ: 101,676
ಯುಕೆ: 55,024
ಇಟಲಿ: 49,823
ಫ್ರಾನ್ಸ್: 48,732
ಇರಾನ್: 45,255
ಸ್ಪೇನ್: 42,619
ಪೆರು: 35,595

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,565,063
ಯುಎಸ್ಎ: 7,453,115
ಬ್ರೆಜಿಲ್: 5,432,505
ರಷ್ಯಾ: 1,611,445
ಅರ್ಜೆಂಟೀನಾ: 1,195,492
ಕೊಲಂಬಿಯಾ: 1,150,932
ಪೆರು:879,439
ಮೆಕ್ಸಿಕೋ: 779,104
ದಕ್ಷಿಣ ಆಫ್ರಿಕಾ: 710,099
ಇರಾನ್: 610,406

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+