Infographics: ಕೊವಿಡ್19ನಿಂದ ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಸೆಪ್ಟೆಂಬರ್ 9: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 223,713,222ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 200,206,867ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 204,821,022 ಪ್ರಕರಣಗಳು ಮುಕ್ತಾಯಗೊಂಡಿವೆ.

2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಗಿದೆ. ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

"ಕರ್ನಾಟಕವು ಒಂದು ದಿನದ ಲಸಿಕಾ ಅಭಿಯಾನದಲ್ಲಿ 12 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಿದೆ. ಕಳೆದ ಐದು ದಿನಗಳಲ್ಲಿ 35 ಲಕ್ಷಕ್ಕೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ," ಎಂದು ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಸೆಪ್ಟೆಂಬರ್ 9) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 40,622 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 40,622 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 43,406 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 33,173,166ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 441,983ಕ್ಕೆ ಏರಿಕೆಯಾಗಿದೆ, 32,333,781ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 40,622 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.68%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಸೆಪ್ಟೆಂಬರ್ 9ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 223,713,222ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,614,155ಕ್ಕೇರಿದೆ. ಒಟ್ಟಾರೆ, 200,206,867 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,892,200 ಸಕ್ರಿಯ ಪಾಸಿಟಿವ್ 103,902 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 204,821,022 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 41,417,648ಪ್ರಕರಣಗಳು
ಭಾರತ: 33,173,166
ಬ್ರೆಜಿಲ್: 20,928,008
ಯುಕೆ: 7,132,072
ರಷ್ಯಾ: 7,084,284
ಫ್ರಾನ್ಸ್: 6,866,856
ಟರ್ಕಿ: 6,566,568
ಇರಾನ್: 5,237,799
ಅರ್ಜೆಂಟೀನಾ: 5,215,332
ಕೊಲಂಬಿಯಾ: 4,923,197

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 671,468
ಬ್ರೆಜಿಲ್: 584,458
ಭಾರತ: 441,983
ಮೆಕ್ಸಿಕೋ: 265,420
ರಷ್ಯಾ: 190,376
ಇಂಡೋನೇಷಿಯಾ: 138,116
ಯುಕೆ: 133,841
ಇಟಲಿ: 129,766
ಕೊಲಂಬಿಯಾ: 125,427
ಫ್ರಾನ್ಸ್: 115,259

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 32,333,781
ಯುಎಸ್ಎ: 31,672,162
ಬ್ರೆಜಿಲ್: 19,966,693
ಫ್ರಾನ್ಸ್: 6,464,416
ರಷ್ಯಾ: 6,340,151
ಟರ್ಕಿ: 6,024,497
ಯುಕೆ: 5,722,272
ಅರ್ಜೆಂಟೀನಾ: 4,912,390
ಕೊಲಂಬಿಯಾ: 4,758,983
ಸ್ಪೇನ್: 4,516,279
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+