ಆ.27: ವಿಶ್ವದಲ್ಲಿ ಕೊವಿಡ್19 ರಿಂದ ಗುಣಮುಖ ಹೊಂದಿದವರೆಷ್ಟು?
ಬೆಂಗಳೂರು, ಆಗಸ್ಟ್ 27: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 215,769,477ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 192,916,240ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 197,409,350 ಪ್ರಕರಣಗಳು ಮುಕ್ತಾಯಗೊಂಡಿವೆ.
2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಗಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಕೋವಿಡ್-19 ಲಸಿಕೀಕರಣ ವ್ಯಾಪ್ತಿ ಮತ್ತು ವೇಗವನ್ನು ವೃದ್ಧಿಸಲು ಬದ್ಧವಾಗಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 27) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 17, 575 ರೋಗಿಗಳು ಚೇತರಿಕೆ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44,558 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 32,648,224ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 437,383ಕ್ಕೆ ಏರಿಕೆಯಾಗಿದೆ, 31,844,012ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 32,926 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.68%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಆಗಸ್ಟ್ 27ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 215,769,477 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,493,110ಕ್ಕೇರಿದೆ. ಒಟ್ಟಾರೆ, 192,916,240 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,360,127 ಸಕ್ರಿಯ ಪಾಸಿಟಿವ್ 112,769 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 197,409,350 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 39,351,343ಪ್ರಕರಣಗಳು
ಭಾರತ: 32,642,710
ಬ್ರೆಜಿಲ್: 20,676,561
ರಷ್ಯಾ: 6,844,049
ಫ್ರಾನ್ಸ್: 6,693,019
ಯುಕೆ: 6,628,709
ಟರ್ಕಿ: 6,293,297
ಅರ್ಜೆಂಟೀನಾ: 5,161,926
ಕೊಲಂಬಿಯಾ: 4,899,085
ಇರಾನ್: 4,869,414

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 652,046
ಬ್ರೆಜಿಲ್: 577,605
ಭಾರತ: 437,205
ಮೆಕ್ಸಿಕೋ: 256,287
ರಷ್ಯಾ: 180,041
ಯುಕೆ: 132,143
ಇಟಲಿ: 128,957
ಕೊಲಂಬಿಯಾ: 124,567
ಫ್ರಾನ್ಸ್: 113,988
ಅರ್ಜೆಂಟೀನಾ: 111,117

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,839,566
ಯುಎಸ್ಎ: 30,732,123
ಬ್ರೆಜಿಲ್: 19,609,503
ಫ್ರಾನ್ಸ್: 6,170,933
ರಷ್ಯಾ: 6,112,035
ಟರ್ಕಿ: 5,771,611
ಯುಕೆ: 5,251,174
ಅರ್ಜೆಂಟೀನಾ: 4,838,745
ಕೊಲಂಬಿಯಾ: 4,729,909
ಇಟಲಿ: 4,243,597
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications