ಕೊವಿಡ್ 19: ಮೇ 22ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?

ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು166,554,767 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 147,351,452ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 150,811,182ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕ್ರಮೇಣ ಇಳಿಕೆಯಾಗುತ್ತಿದ್ದು, ಶನಿವಾರ 2,57,299 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಕೆಲವು ದಿನಗಳಿಂದೀಚೆ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ 2,57,299 ಮಂದಿಯಲ್ಲಿ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಒಂದೇ ದಿನ 3,57,630 ಸೋಂಕಿತರು ಗುಣಮುಖರಾಗಿದ್ದು, ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಏರಿಕೆಯಾಗಿರುವುದು ಸಮಾಧಾನಕರ ಸಂಗತಿಯಾಗಿದೆ

ಭಾರತದಲ್ಲಿ ಶುಕ್ರವಾರ ಕೊರೊನಾ ಸೋಂಕಿಗೆ 4209 ಮಂದಿ ಸಾವನ್ನಪ್ಪಿದ್ದರು. ಒಂದೇ ದಿನದಲ್ಲಿ 2,67,334 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ಸದ್ಯಕ್ಕೆ ಸಾವಿನ ಪ್ರಮಾಣ ಏರಿಕೆ ಹಾದಿಯಲ್ಲಿಯೇ ಇದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4,194 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮೇ 21 ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

 ಕೊವಿಡ್ 19 ಪ್ರಕರಣಗಳು

ಕೊವಿಡ್ 19 ಪ್ರಕರಣಗಳು

ಮೇ 21ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 166,554,767 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,459,730ಕ್ಕೇರಿದೆ. ಒಟ್ಟಾರೆ, 147,351,452ಮಂದಿ ಗುಣಮುಖರಾಗಿದ್ದಾರೆ. ಒಟ್ಟು 15,743,585ಸಕ್ರಿಯ ಪಾಸಿಟಿವ್97,984 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 150,811,182ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

 ವೈರಸ್ ಬಾಧಿತ ಟಾಪ್ 10 ದೇಶಗಳು

ವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 33,862,398ಪ್ರಕರಣಗಳು
ಭಾರತ: 26,289,290
ಬ್ರೆಜಿಲ್: 15,976,156
ಫ್ರಾನ್ಸ್: 5,581,351
ಟರ್ಕಿ: 5,169,951
ರಷ್ಯಾ: 4,992,554
ಯುಕೆ: 4,457,923
ಇಟಲಿ: 4,183,476
ಜರ್ಮನಿ: 3,646,600
ಸ್ಪೇನ್: 3,636,453

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

: ಯುಎಸ್ಎ: ಮೃತರ ಸಂಖ್ಯೆ 603,408
ಬ್ರೆಜಿಲ್: 446,527
ಭಾರತ: 295,525
ಮೆಕ್ಸಿಕೋ: 221,256
ಯುಕೆ: 127,710
ಇಟಲಿ: 125,028
ರಷ್ಯಾ: 118,125
ಫ್ರಾನ್ಸ್: 108,437
ಜರ್ಮನಿ: 87,852
ಸ್ಪೇನ್: 79,620

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಯುಎಸ್ಎ : ಗುಣಮುಖರಾದವರ ಸಂಖ್ಯೆ: 27,399,429
ಭಾರತ: 23,070,365
ಬ್ರೆಜಿಲ್: 14,422,209
ಫ್ರಾನ್ಸ್: 5,186,591
ಟರ್ಕಿ: 4,998,639
ರಷ್ಯಾ: 4,610,465
ಯುಕೆ: 4,297,878
ಇಟಲಿ: 3,766,660
ಜರ್ಮನಿ: 3,387,800
ಸ್ಪೇನ್: 3,356,272 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+