ಆಗಸ್ಟ್ 04: 20 ಕೋಟಿ ದಾಟಿದ ಕೊವಿಡ್19 ಕೇಸ್, 18 ಕೋಟಿ ಚೇತರಿಕೆ

ಬೆಂಗಳೂರು, ಆಗಸ್ಟ್ 04: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 200,606,642ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು180,785,502ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 185,050,558 ಪ್ರಕರಣಗಳು ಮುಕ್ತಾಯಗೊಂಡಿವೆ.

ಕೋವಿಡ್-19 ಲಸಿಕೆ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ದೇಶಾದ್ಯಂತ ಆರಂಭವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದ ಲಸಿಕೆ ಲಭ್ಯತೆ ಖಾತ್ರಿಪಡಿಸುವ ಮೂಲಕ, ಅವುಗಳು ಆಂದೋಲನವನ್ನು ಸಮರ್ಪಕವಾಗಿ ಆಯೋಜಿಸಲು ಪೂರಕವಾಗಿ ಲಸಿಕೆ ಲಭ್ಯತೆಯ ಮುಂಗಡ ಗೋಚರತೆ ಖಚಿತಪಡಿಸುವ ಮೂಲಕ ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುಗಮಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಅಭಿಯಾನಕ್ಕೆ ವೇಗ ನೀಡಿದೆ.

ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಈ ವರೆಗೆ 50.37 ಕೋಟಿ ಗೂ (50,37,22,630) ಹೆಚ್ಚು ಲಸಿಕೆಯನ್ನು ಒದಗಿಸಿದ್ದು, ಎಲ್ಲಾ ಮೂಲಗಳ ಮೂಲಕ ಒಟ್ಟು 49,19,780 ಡೋಸ್ ಲಸಿಕೆ ಪೂರೈಕೆ ಹಂತದಲ್ಲಿದೆ. ವ್ಯರ್ಥವಾದದ್ದು ಸೇರಿ ಒಟ್ಟು ಈವರೆಗೆ [ಇಂದು ಬೆಳಿಗ್ಗೆ 8 ಗಂಟೆವರೆಗಿನ ಮಾಹಿತಿಯಂತೆ] 48,19,75,798 ಡೋಸ್ ಲಸಿಕೆ ಬಳಕೆಯಾಗಿದೆ.

ಒಂದೆಡೆ ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಪ್ರಸ್ತುತ 2.43%ಗೆ ಮತ್ತು ದೈನಂದಿನ ಪಾಸಿಟಿವಿಟಿ ದರ 2.44%ಗೆ ಇಳಿದಿದೆ. ದೈನಂದಿನ ಪಾಸಿಟಿವಿಟಿ ದರ ಸತತ 53 ದಿನಗಳಿಂದ 5% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ.

ರಾಷ್ಟ್ರವ್ಯಾಪೀ ಲಸಿಕಾ ಆಂದೋಲನದ ಅಂಗವಾಗಿ, ಭಾರತ ಸರಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ಒದಗಿಸಿ ಬೆಂಬಲವನ್ನು ನೀಡುತ್ತಿದೆ. ಸಾರ್ವತ್ರಿಕ ಕೋವಿಡ್ -19 ಲಸಿಕಾಕರಣ ಆಂದೋಲನದ ಹೊಸ ಹಂತದಲ್ಲಿ ಕೇಂದ್ರ ಸರಕಾರವು ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುವ ಲಸಿಕೆಗಳಲ್ಲಿ 75% ನಷ್ಟನ್ನು ಖರೀದಿಸಿ ಬಳಿಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ (ಉಚಿತವಾಗಿ) ಪೂರೈಸುತ್ತದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 04ರಂತೆ) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 36,668 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 36,668 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 42,625ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 31,809,049ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 426,294ಕ್ಕೆ ಏರಿಕೆಯಾಗಿದೆ, 30,965,030ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 36,668 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 98.64%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಆಗಸ್ಟ್ 04ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 200,606,642ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,265,056ಕ್ಕೇರಿದೆ. ಒಟ್ಟಾರೆ, 180,785,502ಮಂದಿ ಗುಣಮುಖರಾಗಿದ್ದಾರೆ. ಒಟ್ಟು 15,556,084 ಸಕ್ರಿಯ ಪಾಸಿಟಿವ್ 93,271ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 185,050,558 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 36,055,915ಪ್ರಕರಣಗಳು
ಭಾರತ: 31,809,049
ಬ್ರೆಜಿಲ್: 19,986,073
ರಷ್ಯಾ: 6,356,784
ಫ್ರಾನ್ಸ್: 6,178,632
ಯುಕೆ: 5,952,756
ಟರ್ಕಿ: 5,795,665
ಅರ್ಜೆಂಟೀನಾ: 4,961,880
ಕೊಲಂಬಿಯಾ: 4,807,979
ಸ್ಪೇನ್ : 4,523,310

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 630,532
ಬ್ರೆಜಿಲ್: 558,597
ಭಾರತ: 426,294
ಮೆಕ್ಸಿಕೋ: 241,936
ರಷ್ಯಾ: 161,715
ಯುಕೆ: 130,000
ಇಟಲಿ: 128,115
ಕೊಲಂಬಿಯಾ: 121,484
ಫ್ರಾನ್ಸ್: 111,993
ಅರ್ಜೆಂಟೀನಾ: 106,447

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 30,965,030
ಯುಎಸ್ಎ: 29,756,593
ಬ್ರೆಜಿಲ್: 18,746,865
ಫ್ರಾನ್ಸ್: 5,708,913
ರಷ್ಯಾ: 5,679,842
ಟರ್ಕಿ: 5,472,089
ಕೊಲಂಬಿಯಾ: 4,606,140
ಅರ್ಜೆಂಟೀನಾ: 4,606,026
ಯುಕೆ: 4,567,516
ಇಟಲಿ: 4,141,043
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+