ಆಗಸ್ಟ್ 06: ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳ ಪಟ್ಟಿ

ಬೆಂಗಳೂರು, ಆಗಸ್ಟ್ 04: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 201,977,200ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು4,285,303ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 185,956,658 ಪ್ರಕರಣಗಳು ಮುಕ್ತಾಯಗೊಂಡಿವೆ.

ಕೋವಿಡ್-19 ಲಸಿಕೆ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ದೇಶಾದ್ಯಂತ ಆರಂಭವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದ ಲಸಿಕೆ ಲಭ್ಯತೆ ಖಾತ್ರಿಪಡಿಸುವ ಮೂಲಕ, ಅವುಗಳು ಆಂದೋಲನವನ್ನು ಸಮರ್ಪಕವಾಗಿ ಆಯೋಜಿಸಲು ಪೂರಕವಾಗಿ ಲಸಿಕೆ ಲಭ್ಯತೆಯ ಮುಂಗಡ ಗೋಚರತೆ ಖಚಿತಪಡಿಸುವ ಮೂಲಕ ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುಗಮಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಅಭಿಯಾನಕ್ಕೆ ವೇಗ ನೀಡಿದೆ.

ಭಾರತದ ಕೋವಿಡ್ -19 ಲಸಿಕಾಕರಣದ ವ್ಯಾಪ್ತಿ ನಿನ್ನೆ 49 ಕೋಟಿಯ ಗಡಿ ದಾಟಿದೆ. ಒಟ್ಟು 49,53,27,595 ಲಸಿಕಾ ಡೋಸ್ ಗಳನ್ನು 57,64,712ಅಧಿವೇಶನಗಳ ಮೂಲಕ ನೀಡಲಾಗಿದೆ. ಇಂದು ಬೆಳಿಗ್ಗೆ 7 ಗಂಟೆಗೆ ಲಭ್ಯವಾಗಿರುವ ತಾತ್ಕಾಲಿಕ ವರದಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 57,97,808 ಲಸಿಕಾ ಡೋಸ್ ಗಳನ್ನು ನೀಡಲಾಗಿದೆ.

ಒಂದೆಡೆ ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಪ್ರಸ್ತುತ 2.43%ಗೆ ಮತ್ತು ದೈನಂದಿನ ಪಾಸಿಟಿವಿಟಿ ದರ 2.44%ಗೆ ಇಳಿದಿದೆ. ದೈನಂದಿನ ಪಾಸಿಟಿವಿಟಿ ದರ ಸತತ 53 ದಿನಗಳಿಂದ 5% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ.

ಸಾರ್ವತ್ರಿಕ ಕೋವಿಡ್ -19 ಲಸಿಕಾಕರಣದ ಹೊಸ ಹಂತ 2021 ರ ಜೂನ್ 21 ರಿಂದ ಆರಂಭವಾಗಿದೆ. ಕೇಂದ್ರ ಸರಕಾರವು ಈ ಹಂತವನ್ನು ಇನ್ನಷ್ಟು ತ್ವರಿತಗೊಳಿಸಲು ಮತ್ತು ಇಡೀ ದೇಶಾದ್ಯಂತ ಕೋವಿಡ್ -19 ಲಸಿಕಾಕರಣದ ವ್ಯಾಪ್ತಿಯನ್ನು ವಿಸ್ತರಿಸಲು ಬದ್ಧವಾಗಿದೆ.

ಜಾಗತಿಕ ಸಾಂಕ್ರಾಮಿಕ ಆರಂಭವಾದಂದಿನಿಂದ ಸೋಂಕಿತರಾದವರ ಪೈಕಿ 3,10,15,844 ಮಂದಿ ಈಗಾಗಲೇ ಕೋವಿಡ್ -19 ರಿಂದ ಗುಣಮುಖರಾಗಿದ್ದಾರೆ ಮತ್ತು 41,096 ರೋಗಿಗಳು ಕಳೆದ 24 ತಾಸುಗಳಲ್ಲಿ ಗುಣಮುಖರಾಗಿದ್ದಾರೆ. ಇದರಿಂದ ಒಟ್ಟು ಗುಣಮುಖ ದರ 97.36%. ಆಗಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 06ರಂತೆ) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 40,659 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 40,659 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,001ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 31,884,819ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 427,149ಕ್ಕೆ ಏರಿಕೆಯಾಗಿದೆ, 31,037,245ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 40,659ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.36%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಆಗಸ್ಟ್ 06ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 201,977,200 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,285,303ಕ್ಕೇರಿದೆ. ಒಟ್ಟಾರೆ, 181,671,355ಮಂದಿ ಗುಣಮುಖರಾಗಿದ್ದಾರೆ. ಒಟ್ಟು 16,020,542 ಸಕ್ರಿಯ ಪಾಸಿಟಿವ್ 95,022ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 185,956,658 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 36,305,074ಪ್ರಕರಣಗಳು
ಭಾರತ: 31,861,775
ಬ್ರೆಜಿಲ್: 20,066,587
ರಷ್ಯಾ: 6,402,564
ಫ್ರಾನ್ಸ್: 6,233,876
ಯುಕೆ: 6,014,023
ಟರ್ಕಿ: 5,846,784
ಅರ್ಜೆಂಟೀನಾ: 4,989,402
ಕೊಲಂಬಿಯಾ: 4,821,603
ಸ್ಪೇನ್ : 4,566,571

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 631,899
ಬ್ರೆಜಿಲ್: 560,801
ಭಾರತ: 426,908
ಮೆಕ್ಸಿಕೋ: 243,165
ರಷ್ಯಾ: 163,301
ಯುಕೆ: 130,178
ಇಟಲಿ: 128,187
ಕೊಲಂಬಿಯಾ: 121,899
ಫ್ರಾನ್ಸ್: 112,098
ಅರ್ಜೆಂಟೀನಾ: 107,023

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,015,844
ಯುಎಸ್ಎ: 29,805,593
ಬ್ರೆಜಿಲ್: 18,840,232
ಫ್ರಾನ್ಸ್: 5,732,151
ರಷ್ಯಾ: 5,720,353
ಟರ್ಕಿ: 5,484,821
ಅರ್ಜೆಂಟೀನಾ: 4,630,436
ಕೊಲಂಬಿಯಾ: 4,624,669
ಯುಕೆ: 4,599,885
ಇಟಲಿ: 4,150,915
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+