ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ದರ ಸತತ 15 ದಿನಗಳಿಂದ 3% ಮಟ್ಟಕ್ಕಿಂತ ಕೆಳಗೆ
ಬೆಂಗಳೂರು, ಆಗಸ್ಟ್ 10: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 204,318,511ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 183,489,035ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 187,809,400 ಪ್ರಕರಣಗಳು ಮುಕ್ತಾಯಗೊಂಡಿವೆ.
ಕೋವಿಡ್-19 ಲಸಿಕೆ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ದೇಶಾದ್ಯಂತ ಆರಂಭವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದ ಲಸಿಕೆ ಲಭ್ಯತೆ ಖಾತ್ರಿಪಡಿಸುವ ಮೂಲಕ, ಅವುಗಳು ಆಂದೋಲನವನ್ನು ಸಮರ್ಪಕವಾಗಿ ಆಯೋಜಿಸಲು ಪೂರಕವಾಗಿ ಲಸಿಕೆ ಲಭ್ಯತೆಯ ಮುಂಗಡ ಗೋಚರತೆ ಖಚಿತಪಡಿಸುವ ಮೂಲಕ ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುಗಮಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಅಭಿಯಾನಕ್ಕೆ ವೇಗ ನೀಡಿದೆ.
ಭಾರತದಲ್ಲಿ ಕೋವಿಡ್ - 19 ಲಸಿಕೆ ಪ್ರಮಾಣ 52.56 ಕೋಟಿಗಿಂತ ಹೆಚ್ಚಿನ ಅಂದರೆ 52,56,35,710 ಡೋಸ್ ಲಸಿಕೆಯನ್ನು ಎಲ್ಲಾ ಮೂಲಗಳಿಂದ ಖರೀದಿಸಿ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ, ವಿತರಿಸಿದ್ದು, ಇನ್ನೂ 48,43,100 ಡೋಸ್ ಲಸಿಕೆ ಸದ್ಯದಲ್ಲೇ ಲಭ್ಯವಾಗಲಿದೆ. 52.56 ಕೋಟಿ ಡೋಸ್ ಲಸಿಕೆ ಪೈಕಿ ಸವಕಳಿ ಸೇರಿದಂತೆ 51,09,58,562 ಡೋಸ್ ಲಸಿಕೆ ಬಳಕೆಯಾಗಿದೆ.
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 2.07 ಕೋಟಿಗಿಂತ ಹೆಚ್ಚಿನ ಅಂದರೆ 2,07,55,852 ಡೋಸ್ ಲಸಿಕೆ ಇನ್ನೂ ಲಭ್ಯವಿದೆ.
ಒಂದು ಕಡೆ ಪರೀಕ್ಷೆ ಪ್ರಮಾಣ ಹೆಚ್ಚಿಸಲಾಗಿದ್ದು, ಮತ್ತೊಂದೆಡೆ ವಾರದ ಪಾಸಿಟಿವಿಟಿ ದರ ಪ್ರಸ್ತುತ 2.35% ರಷ್ಟಿದೆ ಮತ್ತು ದೈನಂದಿನ ಪಾಸಿಟಿವಿಟಿ ದರ ಸತತ 14 ದಿನಗಳಿಂದ 3% ಕ್ಕೂ ಕಡಿಮೆ ಇದೆ ಮತ್ತು 63 ದಿನಗಳಿಂದ 5% ಕ್ಕೂ ಕಡಿಮೆ ದಾಖಲಾಗುತ್ತಿದೆ.
ಪಾಸಿಟಿವ್ ದರ: ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.21%ರಷ್ಟಿದ್ದು, ಇದು 2020 ಮಾರ್ಚ್ ನಿಂದ ಅತ್ಯಂತ ಕನಿಷ್ಠವಾಗಿದೆ.ಅತ್ಯಧಿಕ ಚೇತರಿಕೆ ದರ ಸಾಧಿಸಲಾಗಿದ್ದು, ಪ್ರಸ್ತುತ 97.45%ಗೆ ಸುಧಾರಣೆ ಕಂಡಿದೆ. ವಾರದ ಪಾಸಿಟಿವಿಟಿ ದರ 5% ಮಟ್ಟದ ಕೆಳಗೆ ಮುಂದುವರಿದಿದ್ದು, ಪ್ರಸ್ತುತ 2.36%ಗೆ ತಗ್ಗಿದೆ. ದೈನಂದಿನ ಪಾಸಿಟಿವಿಟಿ ದರ 1.87%ಗೆ ಇಳಿಕೆ ಕಂಡಿದ್ದು, ಸತತ 15 ದಿನಗಳಿಂದ 3% ಮಟ್ಟದಿಂದ ಕೆಳಗಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 10ರಂತೆ) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 41,461 ರೋಗಿಗಳು ಚೇತರಿಕೆ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 27, 429 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 31,998,158ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 428,715ಕ್ಕೆ ಏರಿಕೆಯಾಗಿದೆ, 31,180,968ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 41,461ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.45%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಆಗಸ್ಟ್ 10ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 204,318,511ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,320,365ಕ್ಕೇರಿದೆ. ಒಟ್ಟಾರೆ, 183,489,035ಮಂದಿ ಗುಣಮುಖರಾಗಿದ್ದಾರೆ. ಒಟ್ಟು 16,509,111ಸಕ್ರಿಯ ಪಾಸಿಟಿವ್ 100,517ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 187,809,400 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 36,780,480ಪ್ರಕರಣಗಳು
ಭಾರತ: 31,998,158
ಬ್ರೆಜಿಲ್: 20,178,143
ರಷ್ಯಾ: 6,491,288
ಫ್ರಾನ್ಸ್: 6,310,933
ಯುಕೆ: 6,094,243
ಟರ್ಕಿ: 5,942,271
ಅರ್ಜೆಂಟೀನಾ: 5,029,075
ಕೊಲಂಬಿಯಾ: 4,843,007
ಸ್ಪೇನ್ : 4,627,770

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 633,799
ಬ್ರೆಜಿಲ್: 563,707
ಭಾರತ: 428,715
ಮೆಕ್ಸಿಕೋ: 244,690
ರಷ್ಯಾ: 166,442
ಯುಕೆ: 130,357
ಇಟಲಿ: 128,242
ಕೊಲಂಬಿಯಾ: 122,601
ಫ್ರಾನ್ಸ್: 112,288
ಅರ್ಜೆಂಟೀನಾ: 107,961

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,180,968
ಯುಎಸ್ಎ: 29,923,320
ಬ್ರೆಜಿಲ್: 18,939,051
ರಷ್ಯಾ: 5,788,710
ಫ್ರಾನ್ಸ್: 5,777,774
ಟರ್ಕಿ: 5,511,720
ಅರ್ಜೆಂಟೀನಾ: 4,681,661
ಯುಕೆ: 4,667,785
ಕೊಲಂಬಿಯಾ: 4,656,709
ಇಟಲಿ: 4,157,520
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications