Infographics: ಭಾರತದಲ್ಲಿ ಕೊರೊನಾವೈರಸ್ ಚೇತರಿಕೆ ದರ ಶೇ.97.45ಕ್ಕೇರಿಕೆ

ಬೆಂಗಳೂರು, ಆಗಸ್ಟ್ 12: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 205,747,424ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 184,730,415ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 189,072,078 ಪ್ರಕರಣಗಳು ಮುಕ್ತಾಯಗೊಂಡಿವೆ.

ಕೋವಿಡ್-19 ಲಸಿಕೆಯ ಸಾರ್ವತ್ರೀಕರಣದ ಹೊಸ ಹಂತವು 2021ರ ಜೂನ್ 21ರಿಂದ ಪ್ರಾರಂಭವಾಗಿದೆ. ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಮತ್ತು ಅದರ ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಬದ್ಧವಾಗಿದೆ.

ಪ್ರಸ್ತುತ ಭಾರತದ ಚೇತರಿಕೆ ದರ ಶೇ.97.45ರಷ್ಟಿದೆ. ಸಾಂಕ್ರಾಮಿಕ ಪ್ರಾರಂಭವಾದ ನಂತರ ಇದುವರೆಗೂ ಭಾರತ ಸಾಧಿಸಿದ ಗರಿಷ್ಠ ಚೇತರಿಕೆ ದರ ಇದಾಗಿದೆ.

ಸಾಂಕ್ರಾಮಿಕ ರೋಗದ ಆರಂಭದಿಂದ ಸೋಂಕಿಗೆ ಒಳಗಾದ ಜನರಲ್ಲಿ, ಈಗಾಗಲೇ 3,12,60,050 ಜನರು ಕೋವಿಡ್-19ನಿಂದ ಚೇತರಿಸಿಕೊಂಡಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 39,069 ರೋಗಿಗಳು ಚೇತರಿಸಿಕೊಂಡಿದ್ದಾರೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಿರುವುದರಿಂದ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 21,24,953 ಪರೀಕ್ಷೆಗಳನ್ನು ನಡೆಸಲಾಗಿದೆ. ಒಟ್ಟಾರೆಯಾಗಿ, ಭಾರತವು ಇಲ್ಲಿಯವರೆಗೆ 48.73 ಕೋಟಿ (48,73,70,196)ಪರೀಕ್ಷೆಗಳನ್ನು ನಡೆಸಿದೆ.

ಒಂದೆಡೆ ಪರೀಕ್ಷಾ ಸಾಮರ್ಥ್ಯವನ್ನು ದೇಶಾದ್ಯಂತ ಹೆಚ್ಚಿಸಲಾಗಿದ್ದರೂ, ಸಾಪ್ತಾಹಿಕ ಪಾಸಿಟಿವಿಟಿ ದರವು ಪ್ರಸ್ತುತ 2.23% ರಷ್ಟಿದೆ ಮತ್ತು ದೈನಂದಿನ ಪಾಸಿಟಿವಿಟಿ ದರವು ಇಂದು 1.94% ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರವು ಕಳೆದ 17 ದಿನಗಳಿಂದ 3% ಕ್ಕಿಂತ ಕಡಿಮೆ ಮಟ್ಟದಲ್ಲಿ ಮುಂದುವರಿದಿದೆ ಮತ್ತು ಈಗ ಸತತ 66 ದಿನಗಳಿಂದ 5% ಕ್ಕಿಂತ ಕಡಿಮೆ ಮಟ್ಟದಲ್ಲಿ ಮುಂದುವರಿದಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 12ರಂತೆ) ಇಲ್ಲಿದೆ.

ಉಳಿಕೆಯಾದ ಮತ್ತು ಬಳಕೆಯಾಗದ ಕೋವಿಡ್ ಲಸಿಕೆ

ಉಳಿಕೆಯಾದ ಮತ್ತು ಬಳಕೆಯಾಗದ ಕೋವಿಡ್ ಲಸಿಕೆ

ಭಾರತದ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲಾ ಮೂಲಗಳ ಮೂಲಕ 54.04 ಕೋಟಿಗಿಂತಲೂ ಅಧಿಕ (54,04,78,610) ಲಸಿಕೆ ಡೋಸ್‌ಗಳನ್ನು ಒದಗಿಸಲಾಗಿದೆ ಮತ್ತು ಇನ್ನೂ 1,09,83,510 ಡೋಸ್‌ಗಳು ಪೂರೈಕೆ ಹಂತದಲ್ಲಿವೆ.

ಈ ಪೈಕಿ, ವ್ಯರ್ಥವಾದ ಲಸಿಕೆಗಳೂ ಸೇರಿದಂತೆ ಒಟ್ಟು 52,00,96,418 ಡೋಸ್‌ಗಳನ್ನು ಬಳಕೆ ಮಾಡಲಾಗಿದೆ (ಇಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಿದ್ದ ದತ್ತಾಂಶದ ಪ್ರಕಾರ).

ಉಳಿಕೆಯಾದ ಮತ್ತು ಬಳಕೆಯಾಗದ ಇನ್ನೂ2.55 ಕೋಟಿಗೂ ಅಧಿಕ (2,55,54,533) ಕೋವಿಡ್ ಲಸಿಕೆ ಡೋಸ್‌ಗಳು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಲಭ್ಯವಿವೆ.

ಭಾರತದಲ್ಲಿ 24 ಗಂಟೆಗಳಲ್ಲಿ 41,985 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 41,985 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 43, 641 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 32,077,706ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 429,702ಕ್ಕೆ ಏರಿಕೆಯಾಗಿದೆ, 31,260,050ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 41,985ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.45%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಆಗಸ್ಟ್ 12ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 205,747,424ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,341,663ಕ್ಕೇರಿದೆ. ಒಟ್ಟಾರೆ, 184,730,415ಮಂದಿ ಗುಣಮುಖರಾಗಿದ್ದಾರೆ. ಒಟ್ಟು 16,675,346 ಸಕ್ರಿಯ ಪಾಸಿಟಿವ್ 102,399ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 189,072,078 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 37,067,806ಪ್ರಕರಣಗಳು
ಭಾರತ: 32,077,706
ಬ್ರೆಜಿಲ್: 20,249,176
ರಷ್ಯಾ: 6,534,791
ಫ್ರಾನ್ಸ್: 6,370,429
ಯುಕೆ: 6,146,800
ಟರ್ಕಿ: 5,996,224
ಅರ್ಜೆಂಟೀನಾ: 5,052,884
ಕೊಲಂಬಿಯಾ: 4,852,323
ಸ್ಪೇನ್ : 4,660,473

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 635,257
ಬ್ರೆಜಿಲ್: 566,013
ಭಾರತ: 429,702
ಮೆಕ್ಸಿಕೋ: 246,203
ರಷ್ಯಾ: 168,049
ಯುಕೆ: 130,607
ಇಟಲಿ: 128,304
ಕೊಲಂಬಿಯಾ: 122,953
ಫ್ರಾನ್ಸ್: 112,410
ಅರ್ಜೆಂಟೀನಾ: 108,388

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,260,050
ಯುಎಸ್ಎ: 30,050,065
ಬ್ರೆಜಿಲ್: 19,092,832
ರಷ್ಯಾ: 5,828,972
ಫ್ರಾನ್ಸ್: 5,821,100
ಟರ್ಕಿ: 5,543,037
ಅರ್ಜೆಂಟೀನಾ: 4,700,030
ಯುಕೆ: 4,721,899
ಕೊಲಂಬಿಯಾ: 4,668,790
ಇಟಲಿ: 4,166,095
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+