ಭಾರತದಲ್ಲಿ ಕೊರೊನಾವೈರಸ್ ದೈನಂದಿನ ಪಾಸಿಟಿವಿಟಿ ದರ 1.73%

ಬೆಂಗಳೂರು, ಆಗಸ್ಟ್ 14: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 205,747,424ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 184,730,415ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 189,072,078 ಪ್ರಕರಣಗಳು ಮುಕ್ತಾಯಗೊಂಡಿವೆ.

ಕೋವಿಡ್-19 ಲಸಿಕೆಯ ಸಾರ್ವತ್ರೀಕರಣದ ಹೊಸ ಹಂತವು 2021ರ ಜೂನ್ 21ರಿಂದ ಪ್ರಾರಂಭವಾಗಿದೆ. ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಮತ್ತು ಅದರ ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಬದ್ಧವಾಗಿದೆ.

ಭಾರತದಲ್ಲಿ ಶರವೇಗದಲ್ಲಿ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ ಸುಮಾರು ಒಟ್ಟು 60,88,437 ಅವಧಿಗಳಲ್ಲಿ 53,61,89,903 ಕೋವಿಡ್ ಲಸಿಕಾ ಡೋಸ್ ಗಳನ್ನು ಹಾಕಲಾಗಿದೆ. ಕಳೆದ 214 ಗಂಟೆಗಳಲ್ಲಿ 63,80,937 ಲಸಿಕಾ ಡೋಸ್ ಗಳನ್ನು ನೀಡಲಾಗಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಲ್ಲಿಯ ತನಕ ಎಲ್ಲಾ ಮೂಲಗಳಿಂದ 55.73 ಕೋಟಿಗಿಂತ ಹೆಚ್ಚಿನ ಅಂದರೆ 55,73,55,480 ಡೋಸ್ ಲಸಿಕೆ ಪೂರೈಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ, 1,00,37,990 ಡೋಸ್ ಲಸಿಕೆ ಸದ್ಯವೇ ಲಭ್ಯವಾಗಲಿದೆ.

55.73 ಕೋಟಿ ಡೋಸ್ ಲಸಿಕೆ ಪೈಕಿ ಸವಕಳಿ ಸೇರಿದಂತೆ 53,26,03,653 ಡೋಸ್ ಲಸಿಕೆ ಬಳಕೆಯಾಗಿದೆ ಎಂಬ ವಿಚಾರ ಇಂದು ಬೆಳಗ್ಗೆ 8 ಗಂಟೆಗೆ ಬಿಡಗಡೆಯಾಗಿರುವ ದತ್ತಾಂಶದಿಂದ ತಿಳಿದುಬಂದಿದೆ.

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 2.85 ಕೋಟಿಗಿಂತ ಹೆಚ್ಚಿನ ಅಂದರೆ 2,85,43,781 ಡೋಸ್ ಲಸಿಕೆ ಬಳಕೆಗೆ ಲಭ್ಯವಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಇದೀಗ 2.13% ಮತ್ತು ದೈನಂದಿನ ಪಾಸಿಟಿವಿಟಿ ದರ 2.04%ಗೆ ಇಳಿಕೆಯಾಗಿದೆ. ಸತತ 18 ದಿನಗಳಿಂದ ದೈನಂದಿನ ಪಾಸಿಟಿವಿಟಿ ದರ 3% ಮಟ್ಟದಿಂದ ಕೆಳಗಿದೆ ಹಾಗೂ ನಿರಂತರ 67 ದಿನಗಳಿಂದ 5% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ. ಪ್ರಸ್ತುತ ಭಾರತದ ಚೇತರಿಕೆ ದರ ಶೇ. 97.45%ರಷ್ಟಿದೆ. ಸಾಂಕ್ರಾಮಿಕ ಪ್ರಾರಂಭವಾದ ನಂತರ ಇದುವರೆಗೂ ಭಾರತ ಸಾಧಿಸಿದ ಗರಿಷ್ಠ ಚೇತರಿಕೆ ದರ ಇದಾಗಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 14) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 36,189 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 36,189 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 38,775 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 32,162,517ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 430,910ಕ್ಕೆ ಏರಿಕೆಯಾಗಿದೆ, 31,338,088ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 36,189ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.45%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಆಗಸ್ಟ್ 14ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 207,177,127 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,362,342ಕ್ಕೇರಿದೆ. ಒಟ್ಟಾರೆ, 185,783,496ಮಂದಿ ಗುಣಮುಖರಾಗಿದ್ದಾರೆ. ಒಟ್ಟು 17,031,289 ಸಕ್ರಿಯ ಪಾಸಿಟಿವ್ 103,725 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 190,145,838 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 37,365,716ಪ್ರಕರಣಗಳು
ಭಾರತ: 32,162,517
ಬ್ರೆಜಿಲ್: 20,319,000
ರಷ್ಯಾ: 6,579,212
ಫ್ರಾನ್ಸ್: 6,425,436
ಯುಕೆ: 6,211,868
ಟರ್ಕಿ: 6,039,857
ಅರ್ಜೆಂಟೀನಾ: 5,074,725
ಕೊಲಂಬಿಯಾ: 4,860,622
ಸ್ಪೇನ್: 4,693,540

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 637,170
ಬ್ರೆಜಿಲ್: 567,914
ಭಾರತ: 430,910
ಮೆಕ್ಸಿಕೋ: 247,414
ರಷ್ಯಾ: 169,683
ಯುಕೆ: 130,801
ಇಟಲಿ: 128,379
ಕೊಲಂಬಿಯಾ: 123,221
ಫ್ರಾನ್ಸ್: 112,561
ಅರ್ಜೆಂಟೀನಾ: 108,815

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,338,088
ಯುಎಸ್ಎ: 30,130,093
ಬ್ರೆಜಿಲ್: 19,173,917
ರಷ್ಯಾ: 5,867,890
ಫ್ರಾನ್ಸ್: 5,866,134
ಟರ್ಕಿ: 5,575,214
ಯುಕೆ: 4,770,056
ಅರ್ಜೆಂಟೀನಾ: 4,725,426
ಕೊಲಂಬಿಯಾ: 4,681,231
ಇಟಲಿ: 4,175,198
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+