ಜಾಗತಿಕವಾಗಿ ಕೋವಿಡ್ 19 ದೈನಂದಿನ ಸೋಂಕಿತರು, ಚೇತರಿಕೆ ಅಂಕಿ ಅಂಶ
ಬೆಂಗಳೂರು, ಆಗಸ್ಟ್ 15: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 207,744,408ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 186,230,554 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 190,602,504ಪ್ರಕರಣಗಳು ಮುಕ್ತಾಯಗೊಂಡಿವೆ.
ಕೋವಿಡ್-19 ಲಸಿಕೆಯ ಸಾರ್ವತ್ರೀಕರಣದ ಹೊಸ ಹಂತವು 2021ರ ಜೂನ್ 21ರಿಂದ ಪ್ರಾರಂಭವಾಗಿದೆ. ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಮತ್ತು ಅದರ ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಬದ್ಧವಾಗಿದೆ.
ಭಾರತದಲ್ಲಿ ಶರವೇಗದಲ್ಲಿ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ ಸುಮಾರು ಒಟ್ಟು 60,88,437 ಅವಧಿಗಳಲ್ಲಿ 53,61,89,903 ಕೋವಿಡ್ ಲಸಿಕಾ ಡೋಸ್ ಗಳನ್ನು ಹಾಕಲಾಗಿದೆ. ಕಳೆದ 214 ಗಂಟೆಗಳಲ್ಲಿ 63,80,937 ಲಸಿಕಾ ಡೋಸ್ ಗಳನ್ನು ನೀಡಲಾಗಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಲ್ಲಿಯ ತನಕ ಎಲ್ಲಾ ಮೂಲಗಳಿಂದ 55.73 ಕೋಟಿಗಿಂತ ಹೆಚ್ಚಿನ ಅಂದರೆ 55,73,55,480 ಡೋಸ್ ಲಸಿಕೆ ಪೂರೈಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ, 1,00,37,990 ಡೋಸ್ ಲಸಿಕೆ ಸದ್ಯವೇ ಲಭ್ಯವಾಗಲಿದೆ.
55.73 ಕೋಟಿ ಡೋಸ್ ಲಸಿಕೆ ಪೈಕಿ ಸವಕಳಿ ಸೇರಿದಂತೆ 53,26,03,653 ಡೋಸ್ ಲಸಿಕೆ ಬಳಕೆಯಾಗಿದೆ ಎಂಬ ವಿಚಾರ ಇಂದು ಬೆಳಗ್ಗೆ 8 ಗಂಟೆಗೆ ಬಿಡಗಡೆಯಾಗಿರುವ ದತ್ತಾಂಶದಿಂದ ತಿಳಿದುಬಂದಿದೆ.
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 2.85 ಕೋಟಿಗಿಂತ ಹೆಚ್ಚಿನ ಅಂದರೆ 2,85,43,781 ಡೋಸ್ ಲಸಿಕೆ ಬಳಕೆಗೆ ಲಭ್ಯವಿದೆ.
ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಇದೀಗ 2.13% ಮತ್ತು ದೈನಂದಿನ ಪಾಸಿಟಿವಿಟಿ ದರ 2.04%ಗೆ ಇಳಿಕೆಯಾಗಿದೆ. ಸತತ 18 ದಿನಗಳಿಂದ ದೈನಂದಿನ ಪಾಸಿಟಿವಿಟಿ ದರ 3% ಮಟ್ಟದಿಂದ ಕೆಳಗಿದೆ ಹಾಗೂ ನಿರಂತರ 67 ದಿನಗಳಿಂದ 5% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ. ಪ್ರಸ್ತುತ ಭಾರತದ ಚೇತರಿಕೆ ದರ ಶೇ. 97.45%ರಷ್ಟಿದೆ. ಸಾಂಕ್ರಾಮಿಕ ಪ್ರಾರಂಭವಾದ ನಂತರ ಇದುವರೆಗೂ ಭಾರತ ಸಾಧಿಸಿದ ಗರಿಷ್ಠ ಚೇತರಿಕೆ ದರ ಇದಾಗಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 15) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 37,973 ರೋಗಿಗಳು ಚೇತರಿಕೆ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 36, 127 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 32,205,973ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 431,558ಕ್ಕೆ ಏರಿಕೆಯಾಗಿದೆ, 31,381,493ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 37,973ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.45%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಆಗಸ್ಟ್ 15ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 207,744,408 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,371,950 ಕ್ಕೇರಿದೆ. ಒಟ್ಟಾರೆ, 185,783,496ಮಂದಿ ಗುಣಮುಖರಾಗಿದ್ದಾರೆ. ಒಟ್ಟು 17,141,904ಸಕ್ರಿಯ ಪಾಸಿಟಿವ್ 106,727ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 190,602,504 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 37,435,835ಪ್ರಕರಣಗಳು
ಭಾರತ: 32,193,597
ಬ್ರೆಜಿಲ್: 20,350,142
ರಷ್ಯಾ: 6,600,836
ಫ್ರಾನ್ಸ್: 6,449,863
ಯುಕೆ: 6,241,011
ಟರ್ಕಿ: 6,059,806
ಅರ್ಜೆಂಟೀನಾ: 5,080,908
ಕೊಲಂಬಿಯಾ: 4,864,629
ಸ್ಪೇನ್: 4,693,540

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 637,439
ಬ್ರೆಜಿಲ್: 568,833
ಭಾರತ: 431,272
ಮೆಕ್ಸಿಕೋ: 248,167
ರಷ್ಯಾ: 170,499
ಯುಕೆ: 130,894
ಇಟಲಿ: 128,413
ಕೊಲಂಬಿಯಾ: 123,356
ಫ್ರಾನ್ಸ್: 112,612
ಅರ್ಜೆಂಟೀನಾ: 108,936

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,376,015
ಯುಎಸ್ಎ: 30,144,609
ಬ್ರೆಜಿಲ್: 19,195,514
ರಷ್ಯಾ: 5,884,316
ಫ್ರಾನ್ಸ್: 5,881,325
ಟರ್ಕಿ: 5,590,578
ಯುಕೆ: 4,796,774
ಅರ್ಜೆಂಟೀನಾ: 4,736,632
ಕೊಲಂಬಿಯಾ: 4,685,895
ಇಟಲಿ: 4,180,129
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications