ಭಾರತದ ಕೋವಿಡ್ 19 ದೈನಂದಿನ ದೈನಂದಿನ ಪಾಸಿಟಿವಿಟಿ ದರ ಇಳಿಕೆ

ಬೆಂಗಳೂರು, ಆಗಸ್ಟ್ 16: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 208,243,048ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 186,704,742 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 191,083,935ಪ್ರಕರಣಗಳು ಮುಕ್ತಾಯಗೊಂಡಿವೆ.

ಕೋವಿಡ್-19 ಲಸಿಕೆಯ ಸಾರ್ವತ್ರೀಕರಣದ ಹೊಸ ಹಂತವು 2021ರ ಜೂನ್ 21ರಿಂದ ಪ್ರಾರಂಭವಾಗಿದೆ. ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಮತ್ತು ಅದರ ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಬದ್ಧವಾಗಿದೆ.

ಭಾರತದಲ್ಲಿ ಶರವೇಗದಲ್ಲಿ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 54.58 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಕಳೆದ 214 ಗಂಟೆಗಳಲ್ಲಿ 63,80,937 ಲಸಿಕಾ ಡೋಸ್ ಗಳನ್ನು ನೀಡಲಾಗಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಲ್ಲಿಯ ತನಕ ಎಲ್ಲಾ ಮೂಲಗಳಿಂದ 55.73 ಕೋಟಿಗಿಂತ ಹೆಚ್ಚಿನ ಅಂದರೆ 55,73,55,480 ಡೋಸ್ ಲಸಿಕೆ ಪೂರೈಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ, 1,00,37,990 ಡೋಸ್ ಲಸಿಕೆ ಸದ್ಯವೇ ಲಭ್ಯವಾಗಲಿದೆ.

55.73 ಕೋಟಿ ಡೋಸ್ ಲಸಿಕೆ ಪೈಕಿ ಸವಕಳಿ ಸೇರಿದಂತೆ 53,26,03,653 ಡೋಸ್ ಲಸಿಕೆ ಬಳಕೆಯಾಗಿದೆ ಎಂಬ ವಿಚಾರ ಇಂದು ಬೆಳಗ್ಗೆ 8 ಗಂಟೆಗೆ ಬಿಡುಗಡೆಯಾಗಿರುವ ದತ್ತಾಂಶದಿಂದ ತಿಳಿದುಬಂದಿದೆ.

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 2.85 ಕೋಟಿಗಿಂತ ಹೆಚ್ಚಿನ ಅಂದರೆ 2,85,43,781 ಡೋಸ್ ಲಸಿಕೆ ಬಳಕೆಗೆ ಲಭ್ಯವಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.18% ಇದೆ. ಇದರೊಂದಿಗೆ, ಕೊರೊನಾ ಸೋಂಕಿನ ಚೇತರಿಕೆ ದರ ಇದೀಗ 97.48%ಗೆ ಸುಧಾರಣೆ ಕಂಡಿದೆ. 2020 ಮಾರ್ಚ್ ನಿಂದ ಕಂಡುಬಂದಿರುವ ಅತ್ಯಂತ ಗರಿಷ್ಠ ದರ ಇದಾಗಿದೆ. ವಾರದ ಪಾಸಿಟಿವಿಟಿ ದರ 5% ಮಟ್ಟದಿಂದ ಕೆಳಗಿದ್ದು, ಪ್ರಸ್ತುತ ಅದೀಗ 2.01%ಗೆ ಇಳಿಕೆ ಕಂಡಿದೆ. ದೈನಂದಿನ ಪಾಸಿಟಿವಿಟಿ ದರ 2.79%ಗೆ ಇಳಿಕೆ ಕಂಡಿದ್ದು, ಸತತ 21 ದಿನಗಳಿಂದ 3% ಮಟ್ಟದಿಂದ ಕೆಳಗಿದೆ.ಸಾಂಕ್ರಾಮಿಕ ಪ್ರಾರಂಭವಾದ ನಂತರ ಇದುವರೆಗೂ ಭಾರತ ಸಾಧಿಸಿದ ಗರಿಷ್ಠ ಚೇತರಿಕೆ ದರ ಇದಾಗಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 16) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 35,499 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 35,499 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 33,221ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 32,249,573ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 432,110ಕ್ಕೆ ಏರಿಕೆಯಾಗಿದೆ, 31,440,221ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 35,499 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.45%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಆಗಸ್ಟ್ 16ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 208,243,048 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,379,193 ಕ್ಕೇರಿದೆ. ಒಟ್ಟಾರೆ, 186,704,742 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 17,159,113 ಸಕ್ರಿಯ ಪಾಸಿಟಿವ್ 106,714 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 191,083,935 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 37,468,069ಪ್ರಕರಣಗಳು
ಭಾರತ: 32,239,249
ಬ್ರೆಜಿಲ್: 20,364,099
ರಷ್ಯಾ: 6,621,601
ಫ್ರಾನ್ಸ್: 6,471,035
ಯುಕೆ: 6,295,613
ಟರ್ಕಿ: 6,078,653
ಅರ್ಜೆಂಟೀನಾ: 5,084,635
ಕೊಲಂಬಿಯಾ: 4,867,761
ಸ್ಪೇನ್: 4,693,540

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 637,561
ಬ್ರೆಜಿಲ್: 569,218
ಭಾರತ: 431,900
ಮೆಕ್ಸಿಕೋ: 248,380
ರಷ್ಯಾ: 171,305
ಯುಕೆ: 130,979
ಇಟಲಿ: 128,432
ಕೊಲಂಬಿಯಾ: 123,459
ಫ್ರಾನ್ಸ್: 112,656
ಅರ್ಜೆಂಟೀನಾ: 109,041

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,424,473
ಯುಎಸ್ಎ: 30,153,576
ಬ್ರೆಜಿಲ್: 19,218,630
ರಷ್ಯಾ: 5,899,917
ಫ್ರಾನ್ಸ್: 5,886,588
ಟರ್ಕಿ: 5,605,004
ಯುಕೆ: 4,856,841
ಅರ್ಜೆಂಟೀನಾ: 4,746,994
ಕೊಲಂಬಿಯಾ: 4,690,855
ಇಟಲಿ: 4,183,709
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+