ಕೋವಿಡ್ 19: ದೈನಂದಿನ ಪಾಸಿಟಿವಿಟಿ ದರ 1.96%ಕ್ಕೆ ಇಳಿಕೆ

ಬೆಂಗಳೂರು, ಆಗಸ್ಟ್ 18: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 209,720,287ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 187,978,199 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 192,378,523 ಪ್ರಕರಣಗಳು ಮುಕ್ತಾಯಗೊಂಡಿವೆ.

ಕೋವಿಡ್-19 ಲಸಿಕೆಯ ಸಾರ್ವತ್ರೀಕರಣದ ಹೊಸ ಹಂತವು 2021ರ ಜೂನ್ 21ರಿಂದ ಪ್ರಾರಂಭವಾಗಿದೆ. ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಮತ್ತು ಅದರ ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಬದ್ಧವಾಗಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲಾ ಮೂಲಗಳಿಂದ 57.88 ಕೋಟಿಗಿಂತ ಹೆಚ್ಚಿನ ಅಂದರೆ ಒಟ್ಟು 57,8,90,150 ಡೋಸ್ ಲಸಿಕೆ ಪೂರೈಸಲಾಗಿದ್ದು, ಇನ್ನೂ ಹೆಚ್ಚಿನ 18,62,530 ಡೋಸ್ ಲಸಿಕೆ ಸದ್ಯದಲ್ಲೇ ಲಭ್ಯವಾಗಲಿದೆ.

57.88 ಕೋಟಿ ಡೋಸ್ ಲಸಿಕೆ ಪೈಕಿ, ಸವಕಳಿ ಸೇರಿದಂತೆ 55,11,64,635 ಡೋಸ್ ಲಸಿಕೆ ಬಳಕೆಯಾಗಿದೆ ಎಂಬ ವಿಚಾರ ಇಂದು ಬೆಳಗ್ಗೆ 8 ಗಂಟೆಗೆ ಬಿಡುಗಡೆ ಆಗಿರುವ ದತ್ತಾಂಶದಿಂದ ತಿಳಿದುಬಂದಿದೆ.

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಲಭ್ಯವಿರುವ 94 ಲಕ್ಷಕ್ಕಿಂತ ಹೆಚ್ಚಿನ ಅಂದರೆ 94,03,637 ಡೋಸ್ ಲಸಿಕೆ ಬಳಕೆಗೆ ಲಭ್ಯವಿದೆ.

ಭಾರತದ ಚೇತರಿಕೆ ದರ ಇದೀಗ 97.52%ಗೆ ಸುಧಾರಣೆ ಕಂಡಿದ್ದು, 2020 ಮಾರ್ಚ್ ನಿಂದ ಆಗಿರುವ ಗರಿಷ್ಠ ಸುಧಾರಣೆ ಇದಾಗಿದೆ. ಭಾರತದ ಸಕ್ರಿಯ ಪ್ರಕರಣಗಳ ಪ್ರಮಾಣ ಕಳೆದ 148 ದಿನಗಳಲ್ಲೇ ಕನಿಷ್ಠ ಮಟ್ಟಕ್ಕೆ ಅಂದರೆ 3,67,415ಕ್ಕೆ ಇಳಿಕೆ ಕಂಡಿದೆ. ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 1,14%ಗೆ ತಗ್ಗಿದೆ. ಇದು ಸಹ 2020 ಮಾರ್ಚ್ ನಿಂದ ಕಂಡುಬಂದಿರುವ ಕನಿಷ್ಠ ಪ್ರಮಾಣವಾಗಿದೆ.

ದೇಶದೆಲ್ಲೆಡೆ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿರುವ ಫಲವಾಗಿ, ವಾರದ ಪಾಸಿಟಿವಿಟಿ ದರ ಸತತ 54 ದಿನಗಳಿಂದ 3% ಮಟ್ಟದಿಂದ ಕೆಳಗಿದ್ದು, ಅದೀಗ 1.95%ಗೆ ಇಳಿದಿದೆ. ಅಂತೆಯೇ, ದೈನಂದಿನ ಪಾಸಿಟಿವಿಟಿ ದರ 1.96%ಗೆ ಇಳಿಕೆ ಕಂಡಿದೆ. ಸತತ 23 ದಿನಗಳಿಂದ ಅದು 3% ಮಟ್ಟದಿಂದ ಒಳಗಿದೆ ಹಾಗೂ ನಿರಂತರ 72 ದಿನಗಳಿಂದ 5% ಮಟ್ಟದಿಂದ ಕೆಳಗಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 18) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 37,145 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 37,145 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 35,301ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 32,295,224ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 432,834ಕ್ಕೆ ಏರಿಕೆಯಾಗಿದೆ, 31,492,285ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 37,145 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.52%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಆಗಸ್ಟ್ 18ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 209,720,287 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,400,324 ಕ್ಕೇರಿದೆ. ಒಟ್ಟಾರೆ, 187,978,199ಮಂದಿ ಗುಣಮುಖರಾಗಿದ್ದಾರೆ. ಒಟ್ಟು 17,341,764 ಸಕ್ರಿಯ ಪಾಸಿಟಿವ್ 107,759 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 192,378,523 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 37,910,649ಪ್ರಕರಣಗಳು
ಭಾರತ: 32,295,224
ಬ್ರೆಜಿಲ್: 20,417,204
ರಷ್ಯಾ: 6,663,473
ಫ್ರಾನ್ಸ್: 6,504,978
ಯುಕೆ: 6,355,887
ಟರ್ಕಿ: 6,118,508
ಅರ್ಜೆಂಟೀನಾ: 5,096,443
ಕೊಲಂಬಿಯಾ: 4,874,169
ಸ್ಪೇನ್: 4,745,558

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 640,188
ಬ್ರೆಜಿಲ್: 570,718
ಭಾರತ: 432,834
ಮೆಕ್ಸಿಕೋ: 249,529
ರಷ್ಯಾ: 172,909
ಯುಕೆ: 131,260
ಇಟಲಿ: 128,579
ಕೊಲಂಬಿಯಾ: 123,688
ಫ್ರಾನ್ಸ್: 112,864
ಅರ್ಜೆಂಟೀನಾ: 109,405

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,492,285
ಯುಎಸ್ಎ: 30,290,256
ಬ್ರೆಜಿಲ್: 19,313,546
ಫ್ರಾನ್ಸ್: 5,941,185
ರಷ್ಯಾ: 5,939,037
ಟರ್ಕಿ: 5,636,282
ಯುಕೆ: 4,923,892
ಅರ್ಜೆಂಟೀನಾ: 4,767,041
ಕೊಲಂಬಿಯಾ: 4,698,770
ಇಟಲಿ: 4,199,404
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+