ಕೋವಿಡ್ 19: 24 ದಿನಗಳಿಂದ ದೈನಂದಿನ ಪಾಸಿಟಿವಿಟಿ ದರ 3%ಕ್ಕಿಂತ ಕೆಳಗೆ
ಬೆಂಗಳೂರು, ಆಗಸ್ಟ್ 19: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 210,473,612ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 188,533,568 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 192,945,171 ಪ್ರಕರಣಗಳು ಮುಕ್ತಾಯಗೊಂಡಿವೆ.
ಕೋವಿಡ್-19 ಲಸಿಕೆಯ ಸಾರ್ವತ್ರೀಕರಣದ ಹೊಸ ಹಂತವು 2021ರ ಜೂನ್ 21ರಿಂದ ಪ್ರಾರಂಭವಾಗಿದೆ. ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಮತ್ತು ಅದರ ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಬದ್ಧವಾಗಿದೆ.
ಕಳೆದ 24 ಗಂಟೆಗಳಲ್ಲಿ ಕೇವಲ 36,401 ಹೊಸ ಪ್ರಕರಣಗಳು ವರದಿಯಾಗಿವೆ.ಅಧಿಕ ಚೇತರಿಕೆಗಳು ಮತ್ತು ಕಡಿಮೆ ಸಂಖ್ಯೆಯ ಹೊಸ ಪ್ರಕರಣಗಳಿಂದಾಗಿ ಸಕ್ರಿಯ ಪ್ರಕರಣಗಳ ಹೊರೆ 3,64,129ಕ್ಕೆ ಇಳಿದಿದೆ. ಈ ಪ್ರಮಾಣ 149 ದಿನಗಳಲ್ಲೇ ಅತ್ಯಂತ ಕಡಿಮೆ ಎನಿಸಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳು ದೇಶದ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಕೇವಲ 1.13% ರಷ್ಟಿವೆ. ಇದು 2020ರ ಮಾರ್ಚ್ ನಂತರ ಅತ್ಯಂತ ಕಡಿಮೆ ಎನಿಸಿದೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 18,73,757 ಪರೀಕ್ಷೆಗಳನ್ನು ನಡೆಸಲಾಗಿದೆ. ಭಾರತವು ಇದುವರೆಗೂ ಒಟ್ಟು 50.03 ಕೋಟಿ (50,03,00,840) ಪರೀಕ್ಷೆಗಳನ್ನು ನಡೆಸಿದೆ.
ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದರೂ, ಸಾಪ್ತಾಹಿಕ ಪಾಸಿಟಿವಿಟಿ ದರವು ಕಳೆದ 55 ದಿನಗಳಿಂದ 1.95% ಕ್ಕಿಂತ ಕಡಿಮೆ ಇದೆ. ದೈನಂದಿನ ಪಾಸಿಟಿವಿಟಿ ದರವೂ 1.94% ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರವು ಕಳೆದ 24 ದಿನಗಳಿಂದ 3% ಕ್ಕಿಂತ ಕಡಿಮೆ ಇದೆ ಮತ್ತು ಸತತ 73 ದಿನಗಳಿಂದ 5% ಕ್ಕಿಂತ ಕಡಿಮೆ ಮಟ್ಟದಲ್ಲಿ ಮುಂದುವರಿದಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 19) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 37,189 ರೋಗಿಗಳು ಚೇತರಿಕೆ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 35,797ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 32,356,944ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 433,605ಕ್ಕೆ ಏರಿಕೆಯಾಗಿದೆ, 31,552,307ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 37,189 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.53%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಆಗಸ್ಟ್ 19ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 210,473,612 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,411,603ಕ್ಕೇರಿದೆ. ಒಟ್ಟಾರೆ, 188,533,568 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 17,528,441 ಸಕ್ರಿಯ ಪಾಸಿಟಿವ್ 108,080 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 192,945,171 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 38,092,070ಪ್ರಕರಣಗಳು
ಭಾರತ: 32,356,944
ಬ್ರೆಜಿಲ್: 20,458,221
ರಷ್ಯಾ: 6,684,531
ಫ್ರಾನ್ಸ್: 6,533,383
ಯುಕೆ: 6,392,160
ಟರ್ಕಿ: 6,138,452
ಅರ್ಜೆಂಟೀನಾ: 5,106,207
ಕೊಲಂಬಿಯಾ: 4,877,323
ಸ್ಪೇನ್: 4,745,558

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 641,444
ಬ್ರೆಜಿಲ್: 571,703
ಭಾರತ: 433,605
ಮೆಕ್ಸಿಕೋ: 250,469
ರಷ್ಯಾ: 173,700
ಯುಕೆ: 131,373
ಇಟಲಿ: 128,634
ಕೊಲಂಬಿಯಾ: 123,781
ಫ್ರಾನ್ಸ್: 112,976
ಅರ್ಜೆಂಟೀನಾ: 109,652

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,552,307
ಯುಎಸ್ಎ: 30,343,329
ಬ್ರೆಜಿಲ್: 19,362,990
ಫ್ರಾನ್ಸ್: 5,966,263
ರಷ್ಯಾ: 5,963,054
ಟರ್ಕಿ: 5,651,819
ಯುಕೆ: 4,955,689
ಅರ್ಜೆಂಟೀನಾ: 4,774,760
ಕೊಲಂಬಿಯಾ: 4,702,478
ಇಟಲಿ: 4,204,869
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications