ಕೋವಿಡ್ 19: ಆಗಸ್ಟ್‌ 28 ರಂದು ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ

ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 216,298,670 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 193,278,523 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 197,778,937 ಪ್ರಕರಣಗಳು ಮುಕ್ತಾಯಗೊಂಡಿವೆ.

ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,759 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 509 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,26,49,947ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,37,370ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,59,775ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 31,374 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,18,52,802ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,61,110 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 51,68,87,602 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 60.25 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ.

ಈವರೆಗೆ ಕೇಂದ್ರವು ರಾಜ್ಯಗಳಿಗೆ 60.25 (60,25,95,250) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 4,20,58,316 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

ಇನ್ನು ಕೆಲವೇ ದಿನಗಳಲ್ಲಿ 1,51,58,650 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 28 ರಂತೆ) ಇಲ್ಲಿದೆ.

 ಕೊವಿಡ್19 ಪ್ರಕರಣಗಳು

ಕೊವಿಡ್19 ಪ್ರಕರಣಗಳು

ಆಗಸ್ಟ್ 28ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ216,298,670 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,500,414 ಕ್ಕೇರಿದೆ. ಒಟ್ಟಾರೆ, 193,278,523 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,519,733 ಸಕ್ರಿಯ ಪಾಸಿಟಿವ್ 112,931 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 197,778,937 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

 ಕೊರೊನಾ ಬಾಧಿತ ಟಾಪ್ 10 ದೇಶಗಳು

ಕೊರೊನಾ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 39,540,401 ಪ್ರಕರಣಗಳು
ಭಾರತ: 32,649,947
ಬ್ರೆಜಿಲ್: 20,703,906
ರಷ್ಯಾ: 6,863,541
ಫ್ರಾನ್ಸ್: 6,711,268
ಯುಕೆ:6,666,399
ಟರ್ಕಿ: 6,311,637
ಅರ್ಜೆಂಟೀನಾ: 5,167,733
ಕೊಲಂಬಿಯಾ: 4,901,163
ಇಟಲಿ: 4,517,434

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಯುಎಸ್ಎ: ಮೃತರ ಸಂಖ್ಯೆ 653,405
ಬ್ರೆಜಿಲ್:578,396
ಭಾರತ: 437,403
ಮೆಕ್ಸಿಕೋ: 257,150
ರಷ್ಯಾ: 180,840
ಯುಕೆ:132,243
ಇಟಲಿ: 129,002
ಫ್ರಾನ್ಸ್:114,083
ಅರ್ಜೆಂಟೀನಾ: 111,270
ಜರ್ಮನಿ: 92,620

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಭಾರತ: ಗುಣಮುಖರಾದವರ ಸಂಖ್ಯೆ: 30,786,368
ಯುಎಸ್ಎ:31,852,802
ಬ್ರೆಜಿಲ್: 19,629,675
ಫ್ರಾನ್ಸ್: 6,170,625
ಟರ್ಕಿ: 5,786,139
ರಷ್ಯಾ:6,131,446
ಯುಕೆ:5,298,660
ಇಟಲಿ: 4,250,314
ಕೊಲಂಬಿಯಾ: 4,731,933
ಅರ್ಜೆಂಟೀನಾ: 4,846,795 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+