ಕೋವಿಡ್ 19: ಆಗಸ್ಟ್‌ 07 ರಂದು ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ

ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 202,570,878 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 182,060,375 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 186,354,604 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕೊರೊನಾ ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,628 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 617 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,18,95,385ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,27,371ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,12,153ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 40,017 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,10,55,861ಕ್ಕೆ ತಲುಪಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 50,10,09,609 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಇನ್ನು ಭಾರತದಲ್ಲಿ ಒಂದೇ 16,40,287 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 47,65,33,650 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 07 ರಂತೆ) ಇಲ್ಲಿದೆ.

 ಕೊವಿಡ್19 ಪ್ರಕರಣಗಳು

ಕೊವಿಡ್19 ಪ್ರಕರಣಗಳು

ಆಗಸ್ಟ್ 07ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 202,570,878 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,294,229 ಕ್ಕೇರಿದೆ. ಒಟ್ಟಾರೆ, 182,060,375 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 16,216,274 ಸಕ್ರಿಯ ಪಾಸಿಟಿವ್ 95,757 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 186,354,604 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

 ಕೊರೊನಾ ಬಾಧಿತ ಟಾಪ್ 10 ದೇಶಗಳು

ಕೊರೊನಾ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 36,447,123 ಪ್ರಕರಣಗಳು
ಭಾರತ: 31,895,385
ಬ್ರೆಜಿಲ್: 20,108,746
ರಷ್ಯಾ: 6,424,884
ಫ್ರಾನ್ಸ್: 6,258,953
ಯುಕೆ:6,014,023
ಟರ್ಕಿ: 5,870,741
ಅರ್ಜೆಂಟೀನಾ: 5,002,951
ಕೊಲಂಬಿಯಾ: 4,828,583
ಇಟಲಿ: 4,383,787

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಯುಎಸ್ಎ: ಮೃತರ ಸಂಖ್ಯೆ 632,641
ಬ್ರೆಜಿಲ್: 561,807
ಭಾರತ: 427,401
ಮೆಕ್ಸಿಕೋ: 243,733
ರಷ್ಯಾ: 164,094
ಯುಕೆ: 130,178
ಇಟಲಿ: 128,187
ಫ್ರಾನ್ಸ್: 112,158
ಅರ್ಜೆಂಟೀನಾ: 107,213
ಜರ್ಮನಿ: 92,271

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಭಾರತ: ಗುಣಮುಖರಾದವರ ಸಂಖ್ಯೆ: 31,055,861
ಯುಎಸ್ಎ: 29,834,472
ಬ್ರೆಜಿಲ್: 18,868,602
ಫ್ರಾನ್ಸ್: 5,743,040
ಟರ್ಕಿ: 5,491,762
ರಷ್ಯಾ:5,739,838
ಯುಕೆ:4,599,885
ಇಟಲಿ: 4,150,915
ಕೊಲಂಬಿಯಾ: 4,632,801
ಅರ್ಜೆಂಟೀನಾ: 4,645,158 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+