ಜುಲೈ 30: ಕೊವಿಡ್19 ರಿಂದ ಗುಣಮುಖ ಹೊಂದಿದವರೆಷ್ಟು?

ಬೆಂಗಳೂರು, ಜುಲೈ 30: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 197,647,862ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 178,719,880ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 182,939,032 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಸತತ 33 ದಿನಗಳಿಂದ ಪತ್ತೆಯಾಗುತ್ತಿರುವ ಕೊರೊನಾ ಹೊಸ ಪ್ರಕರಣಗಳ ಪ್ರಮಾಣ 50,000 ಮಟ್ಟದ ಕೆಳಗಿರುವುದು ಆಶಾದಾಯಕ ಬೆಳವಣಿಗೆ. ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸುಸ್ಥಿರ ಮತ್ತು ಜಂಟಿ ಸಹಭಾಗಿತ್ವದ ಪ್ರಯತ್ನಗಳ ಫಲವಾಗಿ ದೈನಂದಿನ ಹೊಸ ಕೊರೊನಾ ಪ್ರಕರಣಗಳ ಪ್ರಮಾಣ ಇಳಿಮುಖದ ಹಾದಿ ಹಿಡಿದಿದೆ.

ಒಂದೆಡೆ ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಪ್ರಸ್ತುತ 2.43%ಗೆ ಮತ್ತು ದೈನಂದಿನ ಪಾಸಿಟಿವಿಟಿ ದರ 2.44%ಗೆ ಇಳಿದಿದೆ. ದೈನಂದಿನ ಪಾಸಿಟಿವಿಟಿ ದರ ಸತತ 53 ದಿನಗಳಿಂದ 5% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ.

ರಾಷ್ಟ್ರವ್ಯಾಪೀ ಲಸಿಕಾ ಆಂದೋಲನದ ಅಂಗವಾಗಿ, ಭಾರತ ಸರಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ಒದಗಿಸಿ ಬೆಂಬಲವನ್ನು ನೀಡುತ್ತಿದೆ. ಸಾರ್ವತ್ರಿಕ ಕೋವಿಡ್ -19 ಲಸಿಕಾಕರಣ ಆಂದೋಲನದ ಹೊಸ ಹಂತದಲ್ಲಿ ಕೇಂದ್ರ ಸರಕಾರವು ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುವ ಲಸಿಕೆಗಳಲ್ಲಿ 75% ನಷ್ಟನ್ನು ಖರೀದಿಸಿ ಬಳಿಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ (ಉಚಿತವಾಗಿ) ಪೂರೈಸುತ್ತದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 30ರಂತೆ) ಇಲ್ಲಿದೆ.

24 ಗಂಟೆಗಳಲ್ಲಿ 44,673 ಜನರಿಗೆ ಕೊವಿಡ್-19 ಸೋಂಕು

24 ಗಂಟೆಗಳಲ್ಲಿ 44,673 ಜನರಿಗೆ ಕೊವಿಡ್-19 ಸೋಂಕು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44,673 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 31,612,762 ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 423,840ಕ್ಕೆ ಏರಿಕೆಯಾಗಿದೆ, 30,773,292ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 42,360 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.38%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜುಲೈ 30ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 197,647,862ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,219,152
ಕ್ಕೇರಿದೆ. ಒಟ್ಟಾರೆ, 178,719,880 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 14,708,830ಸಕ್ರಿಯ ಪಾಸಿಟಿವ್ 87,420 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 182,939,032ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 35,592,710ಪ್ರಕರಣಗಳು
ಭಾರತ: 31,579,651
ಬ್ರೆಜಿಲ್: 19,839,369
ರಷ್ಯಾ: 6,242,066
ಫ್ರಾನ್ಸ್: 6,079,239
ಯುಕೆ: 5,830,774
ಟರ್ಕಿ: 5,682,630
ಅರ್ಜೆಂಟೀನಾ: 4,905,925
ಕೊಲಂಬಿಯಾ: 4,766,829
ಸ್ಪೇನ್ : 4,422,291

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 628,549
ಬ್ರೆಜಿಲ್: 554,626
ಭಾರತ: 423,403
ಮೆಕ್ಸಿಕೋ: 239,997
ರಷ್ಯಾ: 157,771
ಯುಕೆ: 129,583
ಇಟಲಿ: 128,047
ಕೊಲಂಬಿಯಾ: 120,126
ಫ್ರಾನ್ಸ್: 111,764
ಅರ್ಜೆಂಟೀನಾ: 105,113

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 30,743,972
ಯುಎಸ್ಎ: 29,627,355
ಬ್ರೆಜಿಲ್: 18,569,991
ಫ್ರಾನ್ಸ್: 5,691,923
ರಷ್ಯಾ: 5,588,848
ಟರ್ಕಿ: 5,443,501
ಅರ್ಜೆಂಟೀನಾ: 4,542,904
ಕೊಲಂಬಿಯಾ: 4,557,829
ಯುಕೆ: 4,498,089
ಇಟಲಿ: 4,132,510
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Recommended Video

      ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಶುರುವಾಯ್ತು ಢವಢವ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+