ಕೋವಿಡ್ 19: ಜುಲೈ 31 ರಂದು ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ

ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 198,072,708 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 178,962,034 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 183,187,471 ಪ್ರಕರಣಗಳು ಮುಕ್ತಾಯಗೊಂಡಿವೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,649 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ ವಾರ 29-30 ಸಾವಿರದ ಅಂಚಿನಲ್ಲಿದ್ದ ಕೊರೊನಾ ಪ್ರಕರಣಗಳು ಇದೀಗ ದ್ವಿಗುಣಗೊಂಡಿವೆ. ಒಂದೇ ದಿನದಲ್ಲಿ 37,291 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಒಂದು ದಿನದ ಅವಧಿಯಲ್ಲಿ 593 ಮಂದಿ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಶನಿವಾರದ ಅಂಕಿಸಂಖ್ಯೆ ಪ್ರಕಾರ, ಇದುವರೆಗೂ ದೇಶದಲ್ಲಿ ಒಟ್ಟು 3,16,13,993 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕು ಲಕ್ಷ ದಾಟಿದ್ದು, ಸದ್ಯ 4,08,920 ಪ್ರಕರಣಗಳಿವೆ.

ಇಲ್ಲಿಯವರೆಗೆ ದೇಶದಲ್ಲಿ ಸೋಂಕಿನಿಂದ 4,23,810 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 3,07,81,263 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 196 ದಿನಗಳಲ್ಲಿ ಈವರೆಗೂ 46 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಶುಕ್ರವಾರ ರಾತ್ರಿ 7 ಗಂಟೆ ವೇಳೆಗೆ 44,38,901 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ.

ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದಿಂದ ಈವರೆಗೆ 48.78 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ.

ಶನಿವಾರ ಲಭ್ಯವಿರುವ ಮಾಹಿತಿಯ ಪ್ರಕಾರ, ತ್ಯಾಜ್ಯಗಳು ಸೇರಿದಂತೆ ಒಟ್ಟು 45,82,60,052 ಪ್ರಮಾಣದಷ್ಟು ಲಸಿಕೆಗಳು ಬಳಕೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ 68,57,590 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಈವರೆಗೆ ಕೇಂದ್ರವು ರಾಜ್ಯಗಳಿಗೆ 48.78 (48,78,63,410) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 3,14,57,081 ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 31 ರಂತೆ) ಇಲ್ಲಿದೆ.

 ಕೊವಿಡ್19 ಪ್ರಕರಣಗಳು

ಕೊವಿಡ್19 ಪ್ರಕರಣಗಳು

ಜುಲೈ 31ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 198,072,708 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,225,437 ಕ್ಕೇರಿದೆ. ಒಟ್ಟಾರೆ, 178,962,034 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 14,885,237 ಸಕ್ರಿಯ ಪಾಸಿಟಿವ್ 87,668 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 183,187,471 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

 ಕೊರೊನಾ ಬಾಧಿತ ಟಾಪ್ 10 ದೇಶಗಳು

ಕೊರೊನಾ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 35,688,506 ಪ್ರಕರಣಗಳು
ಭಾರತ: 31,613,993
ಬ್ರೆಜಿಲ್: 19,880,273
ರಷ್ಯಾ: 6,265,873
ಫ್ರಾನ್ಸ್: 6,103,548
ಯುಕೆ:5,830,774
ಟರ್ಕಿ: 5,704,713
ಅರ್ಜೆಂಟೀನಾ: 4,919,408
ಕೊಲಂಬಿಯಾ: 4,776,291
ಇಟಲಿ: 4,343,519

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಯುಎಸ್ಎ: ಮೃತರ ಸಂಖ್ಯೆ 629,064
ಬ್ರೆಜಿಲ್: 555,512
ಭಾರತ: 423,842
ಮೆಕ್ಸಿಕೋ: 240,456
ರಷ್ಯಾ: 158,563
ಯುಕೆ: 129,583
ಇಟಲಿ: 128,047
ಫ್ರಾನ್ಸ್: 111,824
ಅರ್ಜೆಂಟೀನಾ: 105,586
ಜರ್ಮನಿ: 92,161

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಭಾರತ: ಗುಣಮುಖರಾದವರ ಸಂಖ್ಯೆ: 30,781,263
ಯುಎಸ್ಎ: 29,652,038
ಬ್ರೆಜಿಲ್: 18,595,380
ಫ್ರಾನ್ಸ್: 5,696,559
ಟರ್ಕಿ: 5,449,253
ರಷ್ಯಾ:5,608,619
ಯುಕೆ:4,498,089
ಇಟಲಿ: 4,132,510
ಕೊಲಂಬಿಯಾ: 4,567,701
ಅರ್ಜೆಂಟೀನಾ: 4,557,037 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+